Kalki 2898 AD Sequel Filming Begins – ಕಲ್ಕಿ ಸೀಕ್ವೆಲ್
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಸೀಕ್ವೆಲ್ ಬರಬೇಕಿದೆ. ಆದರೆ, ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾದವು. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ಹೋಗಿದ್ದು, ಚಿತ್ರಕ್ಕೆ ದೊಡ್ಡ ಹಿನ್ನಡೆ ಆಯಿತು. ಸಿನಿಮಾ ನಿಲ್ಲುತ್ತೆ ಎಂದು ಕೂಡ ಹೇಳಲಾಗಿತ್ತು. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಬಗ್ಗೆ ಅಪ್ಡೇಟ್ ಸಿಕ್ಕಿದೆ. ಈ ಸಿನಿಮಾ ಅಧಿಕೃತವಾಗಿ ಆರಂಭ ಆಗಿದೆ. ಇದು ಅಭಿಮಾನಿಗಳ ಖುಷಿ ಕೊಟ್ಟಿದೆ.
‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಇದೆ. ಈ ಸಿನಿಮಾ ದೊಡ್ಡ ಬಜೆಟ್ನಲ್ಲಿ ರೆಡಿ ಆಯಿತು. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರದ ಕಥೆ ಅರ್ಧಕ್ಕೆ ನಿಂತಿದ್ದು, ಸೀಕ್ವೆಲ್ ಬರಬೇಕಿದೆ. ಮೊದಲ ಭಾಗದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ದೀಪಿಕಾ ಸೇರಿದಂತೆ ಅನೇಕರು ನಟಿಸಿದ್ದರು. ಸೀಕ್ವೆಲ್ನಲ್ಲಿ ದೀಪಿಕಾ ಜಾಗವನ್ನು ಸಾಯಿ ಪಲ್ಲವಿ ತುಂಬಿದ್ದಾರೆ ಎನ್ನಲಾಗಿದೆ.
Read this – Murder Case ಶಿವಮೊಗ್ಗ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಲೆ ಪ್ರಕರಣ |Kannada Folks
ಈ ಚಿತ್ರದ ಶೂಟ್ ಯಾವಾಗ ಆರಂಭ ಆಗುತ್ತದೆ ಎಂಬ ಕುತೂಹಲ ಮೂಡಿತ್ತು. ಅದಕ್ಕೆ ಅಮಿತಾಭ್ ಬಚ್ಚನ್ ಕಡೆಯಿಂದ ಉತ್ತರ ಸಿಕ್ಕಿದೆ. ಕಮಲ್ ಹಾಸನ್ ಅವರನ್ನು ಭೇಟಿ ಮಾಡಿರುವ ಫೋಟೋನ ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್ ಅಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ಗೆ ಶೂಟಿಂಗ್ ಶುರುವಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ.
ಪ್ರತಿ ಭಾನುವಾರ ಅಮಿತಾಭ್ ಬಚ್ಚನ್ ಅವರು ಮನೆಯ ಬಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಆದರೆ, ಈ ಬಾರಿ ಅದು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವನ್ನು ವಿವರಿಸಿದ್ದಾರೆ. ಶೂಟ್ ಕಾರಣಕ್ಕೆ ಅವರು ಹೈದರಾಬಾದ್ ಅಲ್ಲಿ ಇದ್ದಾರೆ. ಹೀಗಾಗಿ, ಅಭಿಮಾನಿಗಳ ಭೇಟಿ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ ಈ ವಯಸ್ಸಾಗಿದೆ. ಆದಾಗ್ಯೂ ಅಪರೂಪಕ್ಕೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ಅಶ್ವತ್ಥಾಮ ಆಗಿ ನಟಿಸುತ್ತಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


