HomeNewsKarnataka Launches Industrial Corridors in 9 Districts - ಕೈಗಾರಿಕಾ ಕಾರಿಡಾರ್‌ಗಳನ್ನು ಪ್ರಾರಂಭಿಸಿದೆ.

Karnataka Launches Industrial Corridors in 9 Districts – ಕೈಗಾರಿಕಾ ಕಾರಿಡಾರ್‌ಗಳನ್ನು ಪ್ರಾರಂಭಿಸಿದೆ.

Karnataka Launches Industrial Corridors in 9 Districts - ಕೈಗಾರಿಕಾ ಕಾರಿಡಾರ್‌ಗಳನ್ನು ಪ್ರಾರಂಭಿಸಿದೆ.

Karnataka Launches Industrial Corridors in 9 Districts – ಕೈಗಾರಿಕಾ ಕಾರಿಡಾರ್‌ಗಳನ್ನು ಪ್ರಾರಂಭಿಸಿದೆ.ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ  ಒಲವು

Read this-No disagreement between Siddaramaiah and DK ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿಲ್ಲ

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯ ಭಾಗವಾಗಿ ಕರ್ನಾಟಕದಲ್ಲಿ 9 ಜಿಲ್ಲೆಗಳನ್ನು ಒಳಗೊಂಡ ಈ ಬಹು ಜಿಲ್ಲಾ ಕೈಗಾರಿಕಾ ಕಾರಿಡಾರ್‌ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯ ಪ್ರಮುಖ ಉದ್ದೇಶವೇ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವುದು. ಕೇವಲ ರಾಜಧಾನಿಗೆ ಸೀಮಿತವಾಗಿದ್ದ ಉದ್ಯೋಗ ಮತ್ತು ಹೂಡಿಕೆಯನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲು ಈ ಕಾರಿಡಾರ್ ಸಹಕಾರಿಯಾಗಲಿದೆ.

ಕೆಲ ದಿನಗಳ ಹಿಂದೆ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು. ಎಚ್‌ಡಿ ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ ಎನ್ನುವ ಮೂಲಕ ಶೀಘ್ರದಲ್ಲಿಯೇ ಕರ್ನಾಟಕದಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ ಅಭಿವೃದ್ಧಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಮುಂದಾಗಿದೆ.

Read this-Ayyappa Swamy-ಅಯ್ಯಪ್ಪ ಮಾಲಾಧಾರಿಗಳು ಕಪ್ಪು ಬಟ್ಟೆ ಧರಿಸೋದೇಕೆ?-Top Devotional stories

ಯಾವ್ಯಾವ ಜಿಲ್ಲೆಗಳಿಗೆ ಬಂಪರ್ ಕೊಡುಗೆ?

ಈ ಪ್ರಸ್ತಾವಿತ ಕೈಗಾರಿಕಾ ಕಾರಿಡಾರ್‌ ವ್ಯಾಪ್ತಿಗೆ ಬರುವ ಜಿಲ್ಲೆಗಳನ್ನು ಭೌಗೋಳಿಕವಾಗಿ ಬಹಳ ಆಯಕಟ್ಟಿನ ಜಾಗಗಳಲ್ಲಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.

  1. ಮಂಡ್ಯ
  2. ಮೈಸೂರು
  3. ಚಾಮರಾಜನಗರ
  4. ಕೋಲಾರ
  5. ಹಾಸನ
  6. ಮಂಗಳೂರು (ದಕ್ಷಿಣ ಕನ್ನಡ)
  7. ಹುಬ್ಬಳ್ಳಿ – ಧಾರವಾಡ
  8. ರಾಯಚೂರು
  9. ಬೀದರ್

ಕೈಗಾರಿಕಾ ಕಾರಿಡಾರ್‌ ಪಟ್ಟಿಯಲ್ಲಿ ಹಳೇ ಮೈಸೂರು ಪ್ರಾಂತ್ಯದ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಸಮೀಪದ ಕೋಲಾರ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾ, ರಾಯಚೂರು ಹಾಗೂ ಬೀದರ್‌ ಜಿಲ್ಲೆಗಳು ಇವೆ. ಇದನ್ನು ಗಮನಿಸಿದರೆ, ದಕ್ಷಿಣ ಕರ್ನಾಟಕ, ಕರಾವಳಿ ಭಾಗ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಬೆಸೆಯುವ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ.

ಇದು ರಾಜ್ಯದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ಪ್ರಾದೇಶಿಕ ಆರ್ಥಿಕ ಅಸಮತೋಲನವನ್ನು ನಿವಾರಿಸಲು ಸಹಕಾರಿಯಾಗಲಿದೆ. ಈ ಕೈಗಾರಿಕಾ ಕಾರಿಡಾರ್‌ಗಳಲ್ಲಿ ಸ್ಮಾರ್ಟ್ ಇಂಡಸ್ಟ್ರಿಯಲ್ ಸಿಟಿಗಳನ್ನು ನಿರ್ಮಿಸಲಾಗುವುದು. ಅಂದರೆ, ಇಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳು, ಸುಸ್ಥಿರ ಮೂಲಸೌಕರ್ಯಗಳು ಮತ್ತು ಅತ್ಯಾಧುನಿಕ ಲಾಜಿಸ್ಟಿಕ್ಸ್ ವ್ಯವಸ್ಥೆ ಇರಲಿದ್ದು, ಉತ್ಪಾದನಾ ವಲಯದ ಬೃಹತ್ ಹೂಡಿಕೆಗಳನ್ನು ಆಕರ್ಷಿಸಲು ಈ ಜಿಲ್ಲೆಗಳನ್ನು ರೆಡಿ ಮಾಡಲಾಗುತ್ತಿದೆ.

Read this-High Command statement is more important than Veerappa Moily statement: CM

ಯಾವ ಭಾಗದಲ್ಲಿ ಏನು ಸ್ಪೆಷಲ್ ಕಾರಿಡಾರ್‌?

ಈ ಪ್ರಸ್ತಾವಿತ ಕೈಗಾರಿಕಾ ಕಾರಿಡಾರ್‌ನಲ್ಲಿ ಸುಮ್ಮನೆ ಎಲ್ಲೆಂದರಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವುದಿಲ್ಲ. ಬದಲಾಗಿ, ಆಯಾ ಜಿಲ್ಲೆಯ ಸಂಪನ್ಮೂಲ ಮತ್ತು ಅನುಕೂಲಕ್ಕೆ ತಕ್ಕಂತೆ ವಲಯಗಳನ್ನು ವಿಂಗಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಲಾಜಿಸ್ಟಿಕ್ಸ್, ಮ್ಯಾನುಫ್ಯಾಕ್ಚರಿಂಗ್ ಮತ್ತು ರಫ್ತು ಆಧಾರಿತ ಕೈಗಾರಿಕೆಗಳಿಗೆ ಒತ್ತು ನೀಡಲಾಗುತ್ತದೆ. ಮಂಗಳೂರಿನ ಬಂದರು ಸಂಪರ್ಕ ಮತ್ತು ಉತ್ತರ ಕರ್ನಾಟಕದ ವಾಣಿಜ್ಯ ಕೇಂದ್ರವಾಗಿರುವ ಹುಬ್ಬಳ್ಳಿಯ ಸಾಮರ್ಥ್ಯವನ್ನು ಇಲ್ಲಿ ಬಳಸಿಕೊಳ್ಳಲಾಗುತ್ತದೆ.

ಇನ್ನು, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೌಲ್ಯವರ್ಧಿತ ಕೈಗಾರಿಕೆಗಳು ಮತ್ತು ಎಲೆಕ್ಟ್ರಾನಿಕ್ಸ್ ವಲಯಕ್ಕೆ ಹೆಚ್ಚಿನ ಫೋಕಸ್ ನೀಡಲಾಗುವುದು. ವಿಶೇಷ ಉತ್ಪಾದನೆ ಮತ್ತು ಅಸೆಂಬ್ಲಿಂಗ್ ಘಟಕಗಳು ಇಲ್ಲಿ ತಲೆ ಎತ್ತಲಿವೆ. ರಾಯಚೂರು ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಇಲ್ಲಿ ಕೃಷಿ ಸಂಸ್ಕರಣೆ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳಿಗೆ ಒತ್ತು ನೀಡಲಾಗುವುದು. ಫುಡ್ ಪ್ಯಾಕೇಜಿಂಗ್ ಮತ್ತು ಸಂಸ್ಕರಣಾ ಘಟಕಗಳು ಇಲ್ಲಿ ಬರಲಿವೆ. ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಬೀದರ್‌ ಜಿಲ್ಲೆಗಳಲ್ಲಿ ಸ್ಥಳೀಯ ಆರ್ಥಿಕತೆಗೆ ಪೂರಕವಾಗಿರುವ ಜವಳಿ, ಸಣ್ಣ ಪ್ರಮಾಣದ ಉತ್ಪಾದನೆ ಮತ್ತು ವೈವಿಧ್ಯಮಯ ಕೈಗಾರಿಕಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×