karnataka transport corporations In Loss Says advocate In High Court – ಕರ್ನಾಟಕ ಸಾರಿಗೆ ನಿಗಮಗಳು ನಷ್ಟದಲ್ಲಿವೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತಿವೆ. ಇದರ ಮಧ್ಯೆ ಶಕ್ತಿ ಯೋಜನೆ ಸಹ ಹೊಡೆತಕೊಟ್ಟಿದ್ದು, ವ್ಯಕ್ತಿಯೊಬ್ಬರು ಕೋರ್ಟ್ಗೆ ಸಲ್ಲಿಸಿದ್ದ ಪಿಐಎಲ್ನಲ್ಲಿ ಕರ್ನಾಟಕ ಸಾರಿಗೆ ನಿಗಮಗಳು ಅಸಲಿಯತ್ತು ಬಹಿರಂಗವಾಗಿದೆ. ಹೌದು…ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ಪಿಐಎಲ್ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ವೇಳೆ ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವೆಂಬ ಪರಿಸ್ಥಿತಿ ಇದೆ ಎಂದು ಹೈಕೋರ್ಟ್ಗೆ ಸಾರಿಗೆ ನಿಗಮಗಳ ಪರ ವಕೀಲ ಒಪ್ಪಿಕೊಂಡಿದ್ದಾರೆ.
Read this – Doordarshan news anchor Sarla Maheshwari who passed away; ಸರಳಾ ಮಹೇಶ್ವರಿ ನಿಧನ
ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ದಾವಣಗೆರೆಯ ತಾಹಿರ್ ಹುಸೇನ್ ಎನ್ನುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೊವಿಡ್ ಸಂದರ್ಭದಲ್ಲಿ 323 ಉದ್ಯೋಗಿಗಳು ಮೃತಪಟ್ಟಿದ್ದಾರೆ.ಆದರೆ 7 ಕುಟುಂಬಗಳಿಗೆ ಮಾತ್ರ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಉಳಿದವರಿಗೆ ಹಣ ನೀಡಿಲ್ಲವೆಂದು ಅರ್ಜಿದಾರರ ಆರೋಪಿಸಿದ್ದಾರೆ.
ಇನ್ನೊಂದೆಡೆ ಸಾರಿಗೆ ನಿಗಮಗಳ ಪರ ವಕೀಲ ವಾದ ಮಂಡಿಸಿದ್ದು, ಸಾರಿಗೆ ನಿಗಮಗಳು ನಷ್ಟದಲ್ಲಿ ನಡೆಯುತ್ತಿವೆ. ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವೆಂಬ ಪರಿಸ್ಥಿತಿ ಇದೆ. ಹೀಗಾಗಿ ಪರಿಹಾರ ನಿರ್ಣಯ ಜಾರಿಗೊಳಿಸದಿರಲು ನಿಗಮಗಳು ನಿರ್ಧರಿಸಿವೆ ಎಂದು ಹೇಳಿದರು. ಈ ವಾದ ಪ್ರತಿವಾದ ಆಲಿಸಿದ ಕೋರ್ಟ್, ಶಕ್ತಿ ಯೋಜನೆಯಡಿ ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ? ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿಯ ವಿವರ ಮಾರ್ಚ್ 23ರೊಳಗೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಈ ಮೂಲಕ ಕರ್ನಾಟಕ ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಸಿಬ್ಬಂದಿಗೆ ವೇತನ ನೀಡಲು ಸಹ ಕಷ್ಟವಾಗುತ್ತಿದೆ ಎನ್ನುವುದನ್ನು ವಕೀಲರೇ ಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ. ಈ ಮೂಲಕ ಸಾರಿಗೆ ನಿಗಮಗಳ ಬಂಡವಾಳ ಬಟಾಬಯಲಾಗಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


