HomeNewsKarnataka Weather - ಮೇ 8 ರಂದು ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

Karnataka Weather – ಮೇ 8 ರಂದು ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

Karnataka Weather - ಕರ್ನಾಟಕ ಹವಾಮಾನ: 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?

Karnataka Weather – ಕರ್ನಾಟಕ ಹವಾಮಾನ: 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?

 

 ಕರ್ನಾಟಕದಲ್ಲಿ ಮೇ 8ರಂದು ಹವಾಮಾನ ವೈಪರೀತ್ಯ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ 42°C ತೀವ್ರ ಉಷ್ಣ ಅಲೆ ಇರಲಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಳೆಯ ಸಾಧ್ಯತೆ ಕಡಿಮೆ. ರಾಯಚೂರು, ಕಲಬುರಗಿಯಲ್ಲಿ ಬಿಸಿಲು ಹೆಚ್ಚಿರಲಿದೆ.

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​​, ವಿಜಯಪುರ ಮತ್ತು ಬಳ್ಳಾರಿಯಲ್ಲಿ ವಿಪರೀತ ಉಷ್ಣ ವಾತಾವರಣ ಇರಲಿದ್ದು, ಸುಮಾರು 42 ಡಿಗ್ರಿ ಸೆಲ್ಸಿಯಸ್​​ ವರೆಗೆ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain Alert: ನಾಳೆ ಈ ಜಿಲ್ಲೆಗಳಲ್ಲಿ ಮಳೆ ಪಕ್ಕ! ರಾಜ್ಯಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ | IMD Yellow Alert Karnataka Weather Update Bengaluru Rain Forecast April | - News18 ...

Read here: Karnataka Weather ಮಲೆನಾಡಿನಲ್ಲಿ ದಟ್ಟ ಮಂಜು

ಎಲ್ಲೆಲ್ಲಿ ಮಳೆ?

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೆಯೇ ಉತ್ತರ ಒಳನಾಡು ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಚಾಮರಾಜನರ, ದಾವಣಗೆರೆ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲೂ ಸಣ್ಣ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ.

ಉಳಿದಂತೆ ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಳ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೇಗಿರಲಿದೆ ಬೆಂಗಳೂರು ವಾತಾವರಣ?

ಬೆಂಗಳೂರಿನಲ್ಲಿ ನಾಳೆ ಬಿಸಿಲಿನ ವಾತಾವರಣ ಇರಲಿದ್ದು ನಗರದ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್​ ಇರಲಿದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಹಗಲಿನ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆಯಾದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 6.4ರಿಂದ 16 ಕಿಲೋ ಮೀಟರ್​​ ವರೆಗೆ ಇರಲಿದೆ ಎನ್ನಲಾಗಿದೆ.

Read here: Karnataka Weather  ಡಿಟ್ವಾ ಸೈಕ್ಲೋನ್ ಪರಿಣಾಮ

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments