HomeNewsKohli’s All Time RCB XI-RCB ಸಾರ್ವಕಾಲಿಕ 11 ಹೆಸರು ಮಾಡಿದ ಕೊಹ್ಲಿ |Kannada Folks

Kohli’s All Time RCB XI-RCB ಸಾರ್ವಕಾಲಿಕ 11 ಹೆಸರು ಮಾಡಿದ ಕೊಹ್ಲಿ |Kannada Folks

Virat Kohli Reveals Dream RCB Team

Kohli’s All Time RCB XI-RCB ಸಾರ್ವಕಾಲಿಕ 11 ಹೆಸರು ಮಾಡಿದ ಕೊಹ್ಲಿ

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.IPL 2026: RCB ಸಾರ್ವಕಾಲಿಕ ತಂಡದ ಪ್ರಕಟಿಸಿದ ವಿರಾಟ್! ಕಿಂಗ್​ ಕೊಹ್ಲಿ ತಂಡದಲ್ಲಿ  ಇಬ್ಬರು ಕನ್ನಡಿಗರಿಗೂ ಚಾನ್ಸ್ |RCB's Greatest XI: Virat Kohli Includes Anil  Kumble, KL Rahul, and Mitchell Starc ...

Read this : Boss Film Faces Halt-ಬಾಸ್ ಸಿನಿಮಾಗೆ ನಿಲ್ಲಿಕೆ ನೋಟಿಸ್ |Kannada Folks

ವಿರಾಟ್ ಕೊಹ್ಲಿ ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದಾರೆ. ಈ ಹದಿನೆಂಟು ವರ್ಷಗಳಲ್ಲಿ ಅನೇಕ ಆಟಗಾರರು ಬಂದು ಹೋಗಿದ್ದಾರೆ. ಇವರಲ್ಲಿ ಕೆಲವರು ಆರ್​ಸಿಬಿ ತಂಡದ ಆಲ್​ ಟೈಮ್ ಫೇವರೇಟ್ ಆಗಿ ಗುರುತಿಸಿಕೊಂಡರೆ, ಇನ್ನು ಕೆಲವರು ಮಿಂಚಿ ಮರೆಯಾಗಿದ್ದಾರೆ. ಹೀಗೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ ಇಲೆವೆನ್ ಹೆಸರಿಸಿದ್ದಾರೆ ವಿರಾಟ್ ಕೊಹ್ಲಿ. ಈ ಹನ್ನೊಂದು ಆಟಗಾರರಲ್ಲಿ ಇಬ್ಬರು ಕನ್ನಡಿಗರು ಕೂಡ ಕಾಣಿಸಿಕೊಂಡಿರುವುದು ವಿಶೇಷ.

ವಿರಾಟ್ ಕೊಹ್ಲಿ ತಮ್ಮ ಸಾರ್ವಕಾಲಿಕ ಇಲೆವೆನ್​ನಲ್ಲಿ ಆರಂಭಿಕರಾಗಿ ಆಯ್ಕೆ ಮಾಡಿದ್ದು ಲೆಜೆಂಡ್ ಕ್ರಿಸ್ ಗೇಲ್ ಅವರನ್ನು. ಕ್ರೀಸ್ ಗೇಲ್ ಜೊತೆ ಆರಂಭಿಕನಾಗಿ ತನ್ನನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಆಪತ್ಭಾಂಧವ ಖ್ಯಾತಿಯ ಎಬಿ ಡಿವಿಲಿಯರ್ಸ್ ಅವರನ್ನು ಹೆಸರಿಸಿದ್ದಾರೆ.

ನಾಲ್ಕನೇ ಕ್ರಮಾಂಕಕ್ಕೆ ಕನ್ನಡಿಗ ಕೆಎಲ್ ರಾಹುಲ್ ಅವರ ಹೆಸರು ಸೂಚಿಸಿದ್ದಾರೆ. ಇನ್ನು ಐದನೇ ಕ್ರಮಾಂಕಕ್ಕೆ ಪ್ರಸ್ತುತ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್​ ಆಗಿ ವಿರಾಟ್ ಕೊಹ್ಲಿ ಆಯ್ಕೆ ಮಾಡಿರುವುದು ದಿನೇಶ್ ಕಾರ್ತಿಕ್ ಅವರನ್ನು. ಇನ್ನು ವೇಗಿಗಳಾಗಿ ಹರ್ಷಲ್ ಪಟೇಲ್, ಡೇಲ್ ಸ್ಟೈನ್ ಹಾಗೂ ಮಿಚೆಲ್ ಸ್ಟಾರ್ಕ್​ ಅವರನ್ನು ಹೆಸರಿಸಿದ್ದಾರೆ.

ಹಾಗೆಯೇ ಸ್ಪಿನ್ನರ್​ಗಳಾಗಿ ಕನ್ನಡಿಗ ಅನಿಲ್ ಕುಂಬ್ಳಿ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಅಂದರೆ ಕಿಂಗ್ ಕೊಹ್ಲಿ ಹೆಸರಿಸಿದ ಸಾರ್ವಕಾಲಿಕ ಇಲೆವೆನ್​ನಲ್ಲಿ ಐವರು ಬೌಲರ್​ಗಳಿದ್ದರೆ, ಆರು ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ.

ಇನ್ನು ಈ ಇಲೆವೆನ್​ನ ನಾಯಕನನ್ನಾಗಿ ಆಯ್ಕೆ ಮಾಡಿರುವುದು ರಜತ್ ಪಾಟಿದಾರ್ ಅವರನ್ನು ಎಂಬುದು ವಿಶೇಷ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಟ್ಟಂತಹ ಪಾಟಿದಾರ್ ಅವರನ್ನು ತಮ್ಮ ಸಾರ್ವಕಾಲಿಕ ಇಲೆವೆನ್​ನ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments