Kollegala MLA AR krishnamurthys mother gowramma passes away – ಕೊಳ್ಳೇಗಾಲ ಶಾಸಕ ಆರ್ ಕೃಷ್ಣಮೂರ್ತಿ ತಾಯಿ ಗೌರಮ್ಮ ನಿಧನ
ಕೇರಳದ ರಾಜ್ಯಪಾಲರಾಗಿದ್ದ ದಿವಂಗತ ಬಿ.ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ರಾಚಯ್ಯ (88) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೌರಮ್ಮ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Read this – Dedication of Gandhi statue in front of Belgaum Suvarnasoudha
ಮೃತರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಸೇರಿದಂತೆ ಇಬ್ಬರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಅವರ ನಿವಾಸದಲ್ಲಿ ಸಂಜೆ 4:30 ರ ವರೆಗೆ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
Read this – Renukaswamys father clarified about the rumour ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
ಶನಿವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ