HomeNewsLingaraj Patil Quits BJP Post-ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ |Kannada Folks

Lingaraj Patil Quits BJP Post-ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ |Kannada Folks

Lingaraj Patil Resigns

Lingaraj Patil Quits BJP Post-ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಕರ್ನಾಟಕ ಬಿಜೆಪಿ (Karnataka BJP) ಪಾಳಯದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಾಧ್ಯಕ್ಷ ಹುದ್ದೆ ಸಂಬಂಧ ಬಣ ರಾಜಕೀಯ ತಣ್ಣಗಾಯ್ತು ಎನ್ನುವಷ್ಟರಲ್ಲಿ ಮತ್ತೊಂದು ಪಕ್ಷದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ.ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ - Kannada News  | Lingaraj patil Resigns To Karnataka BJP disciplinary committee chairman  Post for Missed West Graduates ticket | TV9 Kannada

Read this : Air India Express Phuket Crash-ಫುಕೆಟ್‌ನಲ್ಲಿ ಏರ್ ಇಂಡಿಯಾ ಅಪಘಾತ |Kannada Folks

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು,  ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.

ಬಿಜೆಪಿಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆಯಿಲ್ಲ ಎನ್ನುವುದು ದೃಢವಾಗಿದೆ. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ. ಇದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಮಣೆ ಹಾಕಿ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಲೂ ಕಾಲ ಮಿಂಚಿಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದ್ದು, ಎಂಟು ದಿನಗಳವರೆಗೆ ಕಾದು ನೋಡುತ್ತೇನೆ. ಅವಕಾಶ ಸಿಗದಿದ್ದರೆ ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments