HomeNewsMale Mahadeshwara hills - ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ...

Male Mahadeshwara hills – ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ | Kannada Folks

ಚಿರತೆ ದಾಳಿ ನಡೆಸಿದ ಕೂಡಲೇ ಪ್ರವೀಣ್ ಅವರ ಜೊತೆಗಿದ್ದ ಇತರರು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

Male Mahadeshwara hills – ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಬುಧವಾರ ಬೆಳಗ್ಗೆ ಚಿರತೆಯೊಂದು ದಾಳಿ ದಾಳಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತನನ್ನು ಮಂಡ್ಯ ಜಿಲ್ಲೆಯ ಸುಮಾರು 30 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ತನ್ನ ಗ್ರಾಮದವರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಬಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ ಬುಧವಾರ ಮುಂಜಾನೆ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಕಾಲ್ನಡಿಗೆಯಲ್ಲಿ ತೆರಳುವಾಗ ವಡ್ಡಿನ ಬಳಿ ಇದ್ದಕ್ಕಿದ್ದಂತೆ ಪ್ರವೀಣ್ ಮೇಲೆ ದಾಳಿ ನಡೆಸಿದ ಚಿರತೆ, ಕಾಡಿನೊಳಗೆ ಎಳೆದೊಯ್ದಿದೆ. ಈ ವೇಳೆ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದರಿಂದ, ತೀವ್ರ ರಕ್ತಸ್ರಾವವಾಗಿ ಪ್ರವೀಣ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Male Mahadeshwara Hills: ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ವೇಳೆ ಕಾಡಾನೆ ದಾಳಿ,  ಮಹಿಳೆ ಸಾವು | Woman Dies In Wild Elephant Attack At Male Mahadeshwara Hills  - Kannada Oneindia

Read this – Udupi saffron flag row attended event; ಉಡುಪಿ ಕೇಸರಿ ಧ್ವಜ ವಿವಾದ |Kannada Folks

ಚಿರತೆ ದಾಳಿ ನಡೆಸಿದ ಕೂಡಲೇ ಪ್ರವೀಣ್ ಅವರ ಜೊತೆಗಿದ್ದ ಇತರರು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.ಈ ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತನ ಶವವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

ಪಾದಯಾತ್ರೆ ಸ್ಥಗಿತ

ಚಿರತೆ ದಾಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ದಿನ ಪಾದಯಾತ್ರೆಗೆ ಸ್ಥಗಿತಗೊಳಿಸುವಂತೆ ಅರಣ್ಯಾದಿಕಾರಿಗಳು ಸೂಚಿಸಿದ್ದಾರೆ.

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×