Welcome to Kannada Folks   Click to listen highlighted text! Welcome to Kannada Folks
HomeNewsMandya hundreds of crores of illegal activities alleged in the name of...

Mandya hundreds of crores of illegal activities alleged in the name of hemavati canal development

Mandya hundreds of crores of illegal activities alleged in the name of hemavati canal development

Spread the love

Mandya hundreds of crores of illegal activities alleged in the name of hemavati canal development

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಜೀವನಾಡಿ ಅಂದಾಕ್ಷಣ ತಟ್ಟನೆ ನೆನಪಾಗೋದು ಕೆಆರ್‌ಎಸ್‌ ಡ್ಯಾಂ. ಆದ್ರೆ ಜಿಲ್ಲೆಯ ಏಳು ತಾಲ್ಲೂಕುಗಳ ಪೈಕಿ ಐದು ತಾಲ್ಲೂಕುಗಳು ಮಾತ್ರ ಕೆಆರ್‌ಎಸ್‌  ಅಚ್ಚುಕಟ್ಟು ವ್ಯಾಪ್ತಿಗೆ ಬಂದ್ರೆ ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲ್ಲೂಕಿಗೆ ಹಾಸನ ಹೇಮಾವತಿ ಜಲಾಶಯವೇ ಆಸರೆ. ಹೀಗಿರುವಾಗ ಈ ಎರಡು ತಾಲ್ಲೂಕುಗಳಿಗೆ ನೀರು ಪೂರೈಸುವ ಹೇಮಾವತಿ ಎಡದಂಡೆ ನಾಲೆ ಆಧುನೀಕರಣದ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.ಹೇಮಾವತಿ ನಾಲೆ ಅಭಿವೃದ್ಧಿ ಹೆಸರಲ್ಲಿ ನೂರಾರು ಕೋಟಿ ಅಕ್ರಮ ಆರೋಪ

Read this – karwar labour dies by an accident  ಕಾರವಾರದ ಕಾರ್ಮಿಕ ಅಪಘಾತದಿಂದ ಸಾವು

ಹೇಮಾವತಿ ಎಡದಂತೆ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಳಪೆ ಕಾಮಗಾರಿ ಮಾಡಿರೋದಲ್ಲದೇ ನಾಲೆಗೆ ಹೊಸ ಗೇಟ್ ಅಳವಡಿಸದೇ ಬಿಲ್ ಪಾವತಿ ಮಾಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ.

ಅಂದಹಾಗೆ ಈ ನಾಲೆಯನ್ನ ಆಧುನೀಕರಗೊಳಿಸಿ ಅಭಿವೃದ್ಧಿಪಡಿಸಬೇಕು ಎಂಬುದು ಬಹಳ ವರ್ಷಗಳ ರೈತರ ಬೇಡಿಕೆಯಾಗಿತ್ತು. ಹೀಗಾಗಿ ಹಿಂದಿನ ಬಿಜೆಪಿ ಸರ್ಕಾರ 140 ಕಿಮೀ ನಾಲೆ ಅಭಿವೃದ್ಧಿಗೆ ಮುಂದಾಗಿತ್ತು. ಅದಕ್ಕಾಗಿ 883 ಕೋಟಿ ರೂ. ಯೋಜನೆಯನ್ನ ಸಿದ್ಧಪಡಿಸಿ, ಖಾಸಗಿ ಏಜೆನ್ಸಿಯೊಂದಕ್ಕೆ ಕಾಮಗಾರಿಯ ಗುತ್ತಿಗೆ ನೀಡಿತ್ತು. 2021ರಲ್ಲಿ ಆಧುನೀಕರಣ ಕಾಮಗಾರಿ ಮುಗಿದಿದೆ ಎಂದು ಹಣ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಮುಗಿದ ಮೂರೇ ವರ್ಷಕ್ಕೆ ಕಾಂಕ್ರೀಟ್ ಕಿತ್ತು ಬರ್ತಿದ್ದು, ಸಂಪೂರ್ಣವಾಗಿ ಕಳಪೆಯಿಂದ ಕೂಡಿದೆ ಎಂದು ರೈತರು ಆರೋಪಿಸುತ್ತಿದ್ದಾರೆKRS Dam row: Licenses of 33 mining units revoked in Mandya

Read this – Modi, Amit Shah take 100 births but will not go to heaven: Mallikarjuna Kharge said

ಅಲ್ಲದೇ ಕೆ.ಆರ್ ಪೇಟೆ ತಾಲ್ಲೂಕಿನ ಪಿ.ಬಿ ಮಂಚನಹಳ್ಳಿ ಗ್ರಾಮದ ಬಳಿ ಎಸ್ಕೇಪ್ ಗೇಟ್ ಬದಲಾವಣೆ ಮಾಡದಿದ್ರೂ ಗುತ್ತಿಗೆ ಪಡೆದ ಸಂಸ್ಥೆಗೆ ಹಣ ಮಂಜೂರಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳನ್ನ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.ಇನ್ನು ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೂ ರೈತರು ದೂರು ನೀಡಿದ್ದು, ತನಿಖೆ ನಡೆಸುವಂತೆ ನೀರಾವರಿ ಇಲಾಖೆಯ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.Why damming world's rivers is a tricky balancing act

Read this – keonics vendors due amount released-sharath bachegowda

ಹತ್ತಾರು ವರ್ಷಗಳ ಬೇಡಿಕೆ ಈಡೇರಿತು ಅನ್ನೊ ಸಂಭ್ರಮದಲ್ಲಿದ್ದ ರೈತರಿಗೆ ಕಳಪೆ ಕಾಮಗಾರಿ ಶಾಕ್ ತಂದೊಡ್ಡಿದೆ. ನೂರಾರು ಕೋಟಿ ನೀರಿನಲ್ಲಿ ಹೋಮ ಮಾಡಿದಂತಾಗಿದ್ದು, ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!