HomeNewsMenstrual Leave: New Karnataka Govt Order - ಋತುಚಕ್ರ ರಜೆ: ಕರ್ನಾಟಕ ಸರ್ಕಾರದ ಹೊಸ...

Menstrual Leave: New Karnataka Govt Order – ಋತುಚಕ್ರ ರಜೆ: ಕರ್ನಾಟಕ ಸರ್ಕಾರದ ಹೊಸ ಆದೇಶ

Menstrual Leave: New Karnataka Govt Order - ಋತುಚಕ್ರ ರಜೆ: ಕರ್ನಾಟಕ ಸರ್ಕಾರದ ಹೊಸ ಆದೇಶ

Menstrual Leave: New Karnataka Govt Order – ಋತುಚಕ್ರ ರಜೆ: ಕರ್ನಾಟಕ ಸರ್ಕಾರದ ಹೊಸ ಆದೇಶಮಹಿಳೆಯರಿಗೆ ಗುಡ್‌ನ್ಯೂಸ್‌: ಋತುಚಕ್ರದ ರಜೆ ನೀತಿಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ;  ಯಾವೆಲ್ಲಾ ವಲಯಕ್ಕೆ ಅನ್ವಯ? - good news for women karnataka cabinet approves menstrual  leave policy ...

Read this-A Conspiracy to Seize Chandigarh  ಚಂಡೀಗಢ ವಶಪಡಿಸಿಕೊಳ್ಳಲು ನಡೆದ ಸಂಚು

ಬೆಂಗಳೂರು, ಡಿಸೆಂಬರ್‌ 03: ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋುತುಚಕ್ರ ರಜೆ ಕಲ್ಪಿಸಲು ತೀರ್ಮಾನಿಸಿರುವ ಕರ್ನಾಟಕ ಸರ್ಕಾರ ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು.

ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋುತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲಎಂದು ಸ್ಪಷ್ಟಪಡಿಸಲಾಗಿದೆ.

Read this-High Court Nod for Shanth Kumar – ಹೈಕೋರ್ಟ್ ಅನುಮತಿ

ಈ ರಜೆಯನ್ನು ರಜೆ / ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕಾಗಿ ನಮೂದಿಸಬೇಕು. ಋುತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋುತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ ಕಲ್ಪಿಸಿ ಕಳೆದ ನ.12ರಂದು ಸರಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Read this-Bumper Gift for Police Who Cracked Bengaluru Robbery Case  ಪೊಲೀಸರಿಗೆ ಬಂಪರ್ ಗಿಫ್ಟ್

ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ. ಮಹಿಳಾ ನೌಕರರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ರಜೆಯನ್ನು ನೀಡಬೇಕು ಎಂದು ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×