HomeNewsMetro Service Extended on October 3 - ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ

Metro Service Extended on October 3 – ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ

ಅಕ್ಟೋಬರ್ 3ರ ಶನಿವಾರ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಲಾಗಿದ್ದು, ಹೆಚ್ಚುವರಿ ಸಮಯದ ಸಂಚಾರದ ಕುರಿತು ಮಾಹಿತಿ ಇಲ್ಲಿದೆ.

Metro Service Extended on October 3 – ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ

ಬೆಂಗಳೂರು, ಅಕ್ಟೋಬರ್​​ 02: ಲಾಂಗ್​​ ವೀಕೆಂಡ್​​ ಹಿನ್ನೆಲೆ ಊರುಗಳಿಗೆ ತೆರಳುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಜನರ ಓಡಾಟ ಬೆಂಗಳೂರಿನಲ್ಲಿ ಹೆಚ್ಚಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ನಿವಾರಸುವ ನಿಟ್ಟಿನಲ್ಲಿ ಮತ್ತು ಜನರ ಅನುಕೂಲಕ್ಕಾಗಿ ಅಕ್ಟೋಬರ್ 3ರ ಶನಿವಾರದಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮೂಲಕ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮಾಹಿತಿ ಹಂಚಿಕೊಂಡಿದ್ದು, ಟರ್ಮಿನಲ್‌ ನಿಲ್ದಾಣಗಳಿಂದ ಹೊರಡುವ ಕೊನೆಯ ರೈಲುಗಳ ಸಮಯದ ಮಾಹಿತಿಯನ್ನೂ ನೀಡಿದೆ.

  • ನೇರಳೆ ಮಾರ್ಗ: ವೈಟ್‌ಫೀಲ್ಡ್ (ಕಾಡುಗೋಡಿ) ರಾತ್ರಿ 12:00ಕ್ಕೆ ಕೊನೆಯ ರೈಲು ಸಂಚರಿಸಲಿದ್ದರೆ, ಚಲ್ಲಘಟ್ಟ ಮೆಟ್ರೋ ಸ್ಟೇಷನ್​​ನಿಂದ ರಾತ್ರಿ 12:20ಕ್ಕೆ ಕೊನೆಯ ರೈಲು ಹೊರಡಲಿದೆ.
  • ಹಸಿರು ಮಾರ್ಗ: ಮಾದಾವರದಿಂದ ರಾತ್ರಿ 12:15ಕ್ಕೆ ಲಾಸ್ಟ್​​ ಮೆಟ್ರೋ ರೈಲು ಹೊರಡಲಿದ್ದರೆ, ಸಿಲ್ಕ್ ಇನ್‌ಸ್ಟಿಟ್ಯೂಟ್​​ನಿಂದ ಕೊನೆಯ ರೈಲು ರಾತ್ರಿ 12:20ಕ್ಕೆ ಸಂಚರಿಸಲಿದೆ.
  • ಹಳದಿ ಮಾರ್ಗ: ಆರ್.ವಿ.ರಸ್ತೆಯಿಂದ ರಾತ್ರಿ 1:15ಕ್ಕೆ ಕೊನೆಯ ರೈಲು ಹೊರಡಲಿದ್ದರೆ, ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಹೊರಡುವ ಕೊನೆಯ ಮೆಟ್ರೋ ರೈಲಿನ ಸಮಯ ರಾತ್ರಿ 11:55 ಆಗಿದೆ.
  • ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಕೊನೆಯ ಸಂಪರ್ಕ ರೈಲು ರಾತ್ರಿ 12:55ಕ್ಕೆ ಹೊರಡಲಿದೆ.ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆ ತಪ್ಪಿಸಲು ಪ್ರಯಾಣಿಕರು QR ಟಿಕೆಟ್, ಸ್ಮಾರ್ಟ್ ಕಾರ್ಡ್ ಅಥವಾ NCMC ಕಾರ್ಡ್‌ಗಳನ್ನು ಬಳಸಿ. ಜೊತೆಗೆ ಸುಗಮ ಸಂಚಾರಕ್ಕಾಗಿ ಮೆಟ್ರೋ ಮತ್ತು ಭದ್ರತಾ ಸಿಬ್ಬಂದಿಗಳಿಗೆ ಸಹಕರಿಸುವಂತೆಯೂ ಇದೇ ವೇಳೆ ಬಿಎಂಆರ್ಸಿಎಲ್ ಮನವಿ ಮಾಡಿದೆ.

    Follow Us 

    Follow KannadaFolks channel on WhatsApp

    Visit the Kannadafolks.in follow the latest updates

    Subscribe and Receive exclusive content and updates on your favourite topics

    Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

Leave a Reply

- Advertisment -

Most Popular

Recent Comments