HomeNewsMurder Case - ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ |Kannada Folks

Murder Case – ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ |Kannada Folks

ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Murder Case – ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ

ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಇದರಲ್ಲಿ 10 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Read this – Highlights news of the day-ದಿನದ ಪ್ರಮುಖ ಸುದ್ದಿಗಳು

ಘಟನೆ ಬಳಿಕ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ನಡೆದ ಬಡಾವಣೆಯಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾತ್ರೆ ಹಾಗೂ ಮುಂಬರುವ ಹಬ್ಬಗಳ ಹಿನ್ನೆಲೆ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಊರುಗಡೂರು ಭಾಗದಲ್ಲಿ ಔಟ್‌ಪೋಸ್ಟ್ ತೆರೆಯುವ ಮೂಲಕ ವಿಶೇಷ ಪೊಲೀಸ್ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕ ಸಂಕೇತ್ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು ಗಾಂಜಾ ಸೇವಿಸಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಶಿವಮೊಗ್ಗ ಎಸ್‌ಪಿ ನಿಖಿಲ್ ಭರವಸೆ ನೀಡಿದ್ದಾರೆ. ಏತನ್ಮಧ್ಯೆ, ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದ್ದು, ಗಾಂಜಾ ಸೇವನೆ ಹಾಗೂ ಮಾರಾಟದ ವಿರುದ್ಧ ಸಮರ ಸಾರಲಾಗಿದೆ. ಈ ಪ್ರಕರಣದಲ್ಲೂ ಡ್ರಗ್ಸ್ ಸಂಪರ್ಕ ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಎಸ್‌ಪಿ ನಿಖಿಲ್ ಹೇಳಿದ್ದೇನು?

ಕೊಲೆ ಪ್ರಕರಣ ಕುರಿತು ಶಿವಮೊಗ್ಗ ಎಸ್‌ಪಿ ನಿಖಿಲ್ ಮಾಹಿತಿ ನೀಡಿದ್ದು, ಈಗಾಗಲೇ ಕೊಲೆ ಸಂಬಂಧ 7 ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಕ್ರಿಕೆಟ್ ಆಟದ ವೇಳೆ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಎಂಬಾತನ ಬಳಿ ಆರೋಪಿಗಳು ಕ್ರಿಕೆಟ್ ಆಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದಿನಿಂದಲೇ ಗಲಾಟೆ ನಡೆಯುತ್ತಿತ್ತು. ಸಂಕೇತ್ ಗಲಾಟೆ ಬಿಡಿಸಲು ತೆರಳಿದ್ದ ವೇಳೆ ಕೈಯಿಂದ ಗುದ್ದಿ ಹಲ್ಲೆ ನಡೆಸಿದ್ದು, ಅದರಿಂದ ಸಾವಾಗಿದೆ ಎಂದು ಎಸ್​ಪಿ ವಿವರಿಸಿದ್ದಾರೆ.

Read this – NCERT ಎಂಟನೇ ತರಗತಿ ಹೊಸ ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ ಉಲ್ಲೇಖ|Kannada Folks

ಬಂಧಿತ ಅಪ್ರಾಪ್ತರ ಗಾಂಜಾ ಸೇವನೆ ಬಗ್ಗೆ ಪರೀಕ್ಷೆ ನಡೆಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಊರುಗಡೂರು ಭಾಗದಲ್ಲಿ ವಿಶೇಷ ಬೀಟ್ ವ್ಯವಸ್ಥೆ ಮಾಡಲಾಗಿದ್ದು, ಔಟ್‌ಪೋಸ್ಟ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಈ ದುರ್ಘಟನೆ ಜಿಲ್ಲೆಯಲ್ಲಿ ಆತಂಕ ಉಂಟುಮಾಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×