ಮೈಸೂರು ದಸರಾ ಮಹೋತ್ಸವ ಉದ್ಘಾಟನೆ-Mysore Dasara
ಸಾಂಸ್ಕೃತಿಕನಗರಿ ಮೈಸೂರಿನಲ್ಲೀಗ ದಸರಾ ಮಹೋತ್ಸವ ಕಳೆಗಟ್ಟಿದೆ (Mysuru Dasara). ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.
Read this-Dasara Day 1- Story of goddess shailaputri: Navarathri Vibhava
ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಜೋರಾಗಿದೆ. ಉದ್ಘಾಟನೆಗೆ ಭಕ್ತರಿಗೂ ಅವಕಾಶ ನೀಡಲಾಗಿದೆ. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಮಾರಂಭಕ್ಕೆ ಜಿಲ್ಲಾಡಳಿತದಿಂದ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಮಹಿಷಾಸುರ ಮರ್ಧನಿ ರೂಪದ ಚಾಮುಂಡೇಶ್ವರಿ ವಿಗ್ರಹವನ್ನು ನಿನ್ನೆ ದೇಗುಲದ ಅರ್ಚಕರು ಶುಚಿಗೊಳಿಸಿ ಪೂಜೆ ಸಲ್ಲಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಯನ್ನು ಟಿವಿ9 ಲೈವ್ನಲ್ಲಿ ವೀಕ್ಷಿಸಿ.
Read this-ನವರಾತ್ರಿಯ ನಾಲ್ಕನೇ ದಿನವನ್ನು ಹೇಗೆ ಆಚರಿಸುತ್ತಾರೆ?- Navratri Celebration