Namma Metro Red Line – ನಮ್ಮ ಮೆಟ್ರೋ ರೆಡ್ ಲೈನ್ ಡಿಪಿಆರ್‌ಗೆ ಕೇಂದ್ರ ಸರ್ಕಾರದ ಆಕ್ಷೇಪ
ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್ ನ್ಯೂಸ್ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್ ಲೈನ್ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್‌ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ.![]()
Read this – Sudharani appointed as Nandini products brand ambassador ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ
ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ?
ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405 ಕೋಟಿ ಡಿಪಿಆರ್ ಹಿನ್ನೆಲೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ. ಡಬಲ್ ಡೆಕ್ಕರ್ ಮಾಡೋದ್ರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ರೆಡ್ ಲೈನ್ ಮೆಟ್ರೋ ಕಾರಿಡಾರ್ಗಳಲ್ಲಿ ಡಬಲ್ ಡೆಕ್ಕರ್ ಬೇಡ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೇಕಾದಲ್ಲಿ ಅಗತ್ಯ ಜಂಕ್ಷನ್ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಮಾಡಲು ಒಪ್ಪಿಗೆ ಸೂಚಿಸಲಾಗಿದ್ದು, ಯೋಜನೆಯನ್ನು ಮರುಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆಯ ಡಿಪಿಆರ್‌ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳನ್ನು ಈ ಮಾರ್ಗ ಹೊಂದಲಿದೆ. ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸಲಿದೆ ಎಂದು ಹೇಳಲಾಗಿತ್ತು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತಾದರೂ ಈಗ ಕೇಂದ್ರ ಸರ್ಕಾರ ಯೋಜನೆಯ ಡಿಪಿಆರ್‌ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 

