Homeಕನ್ನಡ ಫೊಕ್ಸ್Pakistan-ಪಾಕಿಸ್ತಾನದಲ್ಲಿ ರಕ್ತದೋಕುಳಿ - Daily News

Pakistan-ಪಾಕಿಸ್ತಾನದಲ್ಲಿ ರಕ್ತದೋಕುಳಿ – Daily News

Pakistan-ಪಾಕಿಸ್ತಾನದಲ್ಲಿ ರಕ್ತದೋಕುಳಿ - Daily News

Pakistan-ಪಾಕಿಸ್ತಾನದಲ್ಲಿ ರಕ್ತದೋಕುಳಿ – Daily News

ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಟಿಟಿಪಿಯ 19 ಭಯೋತ್ಪಾದಕರು ಮತ್ತು ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.ಪಾಕಿಸ್ತಾನದಲ್ಲಿ ರಕ್ತಪಾತ: ಎನ್‌ಕೌಂಟರ್‌ ವೇಳೆ Pakistan ಲೆಫ್ಟಿನೆಂಟ್ ಕರ್ನಲ್, ಮೇಜರ್  ಸೇರಿದಂತೆ 11 ಪಾಕ್ ಸೈನಿಕರ ಹತ್ಯೆ

Read this-Narendra Modi  ಆಡಳಿತ ಸಾಧನೆ  Complete Details

ಅಫ್ಘಾನಿಸ್ತಾನದ ಗಡಿಯಲ್ಲಿರುವ ಪ್ರಾಂತ್ಯದ ಒರಾಕ್ಜೈ ಜಿಲ್ಲೆಯಲ್ಲಿ “ಫಿಟ್ನಾ ಅಲ್-ಖವಾರಿಜ್” ಗೆ ಸಂಬಂಧಿಸಿದ ಭಯೋತ್ಪಾದಕರು ಅಡಗಿರುವ ಮಾಹಿತಿ ಸಿಕ್ಕ ಬೆನ್ನಲ್ಲೆ ಅಕ್ಟೋಬರ್ 7-8 ರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ನಿಷೇಧಿತ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಭಯೋತ್ಪಾದಕ ಗುಂಪನ್ನು ಉಲ್ಲೇಖಿಸಲು “ಫಿಟ್ನಾ ಅಲ್-ಖವಾರಿಜ್” ಎಂಬ ಪದವನ್ನು ಬಳಸಲಾಗುತ್ತದೆ.

ಪಾಕ್ ಸೈನಿಕರು ಮತ್ತು ಭಯೋತ್ಪಾದಕರ ನಡುವಿನ ಭೀಕರ ಗುಂಡಿನ ಚಕಮಕಿಯ ಸಂದರ್ಭದಲ್ಲಿ, 19 ಭಯೋತ್ಪಾದಕರು ಹತ್ಯೆಗೀಡಾಗಿದ್ದು ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಸೇರಿದಂತೆ 11 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Read this-ಅದಾನಿ ಪವರ್ ಷೇರು ವಿಭಜನೆ-Adani Power stock split

ನಿಷೇಧಿತ ಟಿಟಿಪಿ 2022ರ ನವೆಂಬರ್‌ನಲ್ಲಿ ಸರ್ಕಾರದೊಂದಿಗೆ ಕದನ ವಿರಾಮವನ್ನು ಕೊನೆಗೊಳಿಸಿದ ನಂತರ ಭದ್ರತಾ ಪಡೆಗಳು, ಪೊಲೀಸರು ಮತ್ತು ಕಾನೂನು ಜಾರಿ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ವಿಶೇಷವಾಗಿ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಿವೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×