Petrol diesel price hike – ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ, ನಿರ್ಧಾರ ಹಿಂಪಡೆಯಲು ಆಗ್ರಹ
ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿದರು. ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ. ಇತರ ವಸ್ತುಗಳ ಬೆಲೆಯೂ ಏರಿಕೆ ಆಗುತ್ತದೆ. ಹಾಗಾಗಿ ಇದರಿಂದ ಜನರು ಸಮಸ್ಯೆ ಅನುಭವಿಸುವಂತಾಗುತ್ತದೆ. ಕೂಡಲೇ ದರ ಏರಿಕೆ ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ. ಪೆಟ್ರೋಲ್ – ಡೀಸೆಲ್ ದರ ಏರಿಕೆ ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾಗಿ ಶುಕ್ರವಾರ ಅವರು ಬೆಂಗಳೂರಿನಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


