HomeNewsPlane Crashes in At Vijayapura-ವಿಜಯಪುರದಲ್ಲಿ ವಿಮಾನ ಪತನ

Plane Crashes in At Vijayapura-ವಿಜಯಪುರದಲ್ಲಿ ವಿಮಾನ ಪತನ

vijayapura plane crashed : ವಿಜಯಪುರದಲ್ಲಿ ವಿಮಾನ ಪತನ

Plane Crashes in At Vijayapura-ವಿಜಯಪುರದಲ್ಲಿ ವಿಮಾನ ಪತನ

ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ (Belagavi) ತೆರಳುತ್ತಿದ್ದ ವೇಳೆ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Plane Crash News | Latest Plane Crash Updates in Kannada Vishwavani TV

ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಟ್‌ನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read This:Highlights news of the day-ದಿನದ ಪ್ರಮುಖ ಸುದ್ದಿಗಳು

ರೆಡ್ ಬರ್ಡ ಎವಿಯೇಷನ್ ಎಂಬ ವಿಮಾನ ತರಬೇತಿ ಸಂಸ್ಥೆ ಉಪಯೋಗಿಸುತ್ತಿದ್ದ ಸೆಸ್ನಾ 172 ಟ್ಯಾಂಗೋ ಚಾರ್ಲಿ ಲಘು ವಿಮಾನದಲ್ಲಿ ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ನಿರತ ಪೈಲಟ್ ಕುನಾಲ್ ಶಂಕರ್ ಇದ್ದರು. ಆದ್ರೆ, ಘಟನೆಯಲ್ಲಿ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆಗೆ ಏನು ಕಾರಣ ಎನ್ನುವುದು ತಿಳಿದುಬರಬೇಕಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×