Plot to attack ram temple with hand grenade suspected terrorist arrested in Haryana
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ.
Read this – Two people including the driver were killed in auto collided with two bmtc buses in Bengaluru
ಹರಿಯಾಣದ ಫರಿದಾಬಾದ್‌ನಲ್ಲಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಫೈಜಾಬಾದ್ ಮೂಲದ ಅಬ್ದುಲ್ ರೆಹಮಾನ್, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಕಾರಣ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ಬಹಿರಂಗವಾಗಿದೆ.
Read this – Two people including the driver were killed in auto collided with two bmtc buses in Bengaluru
ರಾಮಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ಬಳಸಿ ದಾಳಿ ಮಾಡಿ ಭಾರಿ ವಿನಾಶವನ್ನುಂಟುಮಾಡುವುದು ಅಬ್ದುಲ್ ರೆಹಮಾನ್ ಸಂಚಾಗಿತ್ತು. ಪಿತೂರಿಯ ಭಾಗವಾಗಿ, ಅಬ್ದುಲ್ ಹಲವು ಬಾರಿ ರಾಮ ಮಂದಿರದ ಪರಿಶೀಲನೆ ನಡೆಸಿದ್ದ ಮತ್ತು ಎಲ್ಲಾ ಮಾಹಿತಿಯನ್ನು ಪಾಕಿಸ್ತಾನದ ಐಎಸ್‌ಐ ಜೊತೆ ಹಂಚಿಕೊಂಡಿದ್ದ