Polluted water supply – ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಬ್ರ್ಯಾಂಡ್ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಶುದ್ಧ ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಬಂದೊದಗಿದೆ. ದಕ್ಷಿಣ ನಗರಪಾಲಿಕೆ ವ್ಯಾಪ್ತಿಯ ಸಿಂಹಾದ್ರಿ ಲೇಔಟ್‌ನಲ್ಲಿ ಪೂರೈಕೆಯಾಗುತ್ತಿರುವ ನೀರು ರಾಸಾಯನಿಕ ಮತ್ತು ಕೊಳಚೆ ಮಿಶ್ರಿತವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯಲು ಹಾಗೂ ಮನೆ ಬಳಕೆಗೆ ಸರಬರಾಜು ಆಗುತ್ತಿರುವ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ಮಲಮೂತ್ರದ ಅಂಶಗಳು ಪತ್ತೆಯಾಗಿವೆ. ಜನರು ಗತಿ ಇಲ್ಲದೆ ಇದೇ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ. ಈ ಸಮಸ್ಯೆ ಬಗ್ಗೆ ಟಿವಿ9 ವರದಿ ಮಾಡುತ್ತಿದ್ದಂತೆ, ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚರಂಡಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ




