HomeNewsPUC Results April 9-ಪಿಯುಸಿ ಫಲಿತಾಂಶ ದಿನಾಂಕ ನಿಗದಿ |Kannada Folks

PUC Results April 9-ಪಿಯುಸಿ ಫಲಿತಾಂಶ ದಿನಾಂಕ ನಿಗದಿ |Kannada Folks

Results to be announced by the state board on scheduled date

PUC Results April 9-ಪಿಯುಸಿ ಫಲಿತಾಂಶ ದಿನಾಂಕ ನಿಗದಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ವಿಚಾರವಾಗಿ ಮಹತ್ವದ ಮಾಹಿತಿ ಲಭಿಸಿದೆ. ಏಪ್ರಿಲ್​​ 7 ಅಂದರೆ ಇಂದು ರಿಸಲ್ಟ್​​ ಬರಬಹುದೆಂಬ ನಿರೀಕ್ಷೆ ಇತ್ತಾದರೂ ಕೆಲ ಕಾರಣಗಳಿಂದ ಫಲಿತಾಂಶ ವಿಳಂಬವಾಗಿದೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅದಿಕಾರಿಗಳ ಪ್ರಕಾರ ರಿಸಲ್ಟ್​​ ಪ್ರಕಟಿಸಲು ದಿನಾಂಕ ನಿಗದಿಯಾಗಿದ್ದು, ಆ ಕುರಿತ ಮಾಹಿತಿ ಇಲ್ಲಿದೆ.Karnataka 2nd PUC Result 2026: ಸೆಕೆಂಡ್ ಪಿಯುಸಿ ಫಲಿತಾಂಶ ಘೋಷಣೆಗ್ ಮುಹೂರ್ತ  ಫಿಕ್ಸ್? ಫಲಿತಾಂಶ ತೂಪುನು ಎಂಚ - Tulu Samachara | ತುಳು ಸಮಾಚಾರ | Tulu News

Read this : Iran Leadership Doubts-ಮೊಜ್ತಬಾ ಅಸಮರ್ಥ

ಬೆಂಗಳೂರು, ಏಪ್ರಿಲ್​​ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್​​ 07)ರಂದು ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕ ಕಾರಣ, ಫಲಿತಾಂಶದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಈ ನಡುವೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ.

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಲ್ಲಿ ನಡೆದಿದ್ದು, 7,10,363ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಕ್ಸಾಂ ಬರೆದಿದ್ದಾರೆ. ಇಲ್ಲಿಯವರೆಗೆ ಇದ್ದ ಮಾಹಿತಿಯ ಪ್ರಕಾರ ಏಪ್ರಿಲ್ 7ರಂದು ಅಂದರೆ ಇಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಅಧಿಕೃತ ಪ್ರಕಟಣೆ ಹೊರಬಾರದ ಕಾರಣ ಅನಿಶ್ಚಿತತೆ ಉಂಟಾದ ಪರಿಣಾಮ ವಿದ್ಯಾರ್ಥಿಗಳಲ್ಲಿಯೂ ಗೊಂದಲ ಮೂಡಿತ್ತು. ಈ ನಡುವೆ ಫಲಿತಾಂಶ ಪ್ರಕಟವಾಗಲಿರುವ ದಿನಾಂಕದ ಬಗ್ಗೆ ಬಗ್ಗೆ ಮಹತ್ವದ ಮಾಹಿತಿ ಸಿಕ್ಕಿದೆ.  ಇನ್ನು ಪ್ರಕಟವಾಗಲಿರುವ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕ (Date of Birth) ನಮೂದಿಸಿ ಮಾರ್ಕ್ಸ್ ಅನ್ನು ಪರಿಶೀಲಿಸಬಹುದಾಗಿದೆ.

ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲು ಕೆಲ ಅಡ್ಡಿಗಳಿವೆ. ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಿರುವ ಕಾರಣ ಫಲಿತಾಂಶ ಪ್ರಕಟ ವಿಳಂಬವಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments