Welcome to Kannada Folks   Click to listen highlighted text! Welcome to Kannada Folks
HomeNewsR Ashok reacts on stone pelting on udayagiri police station in mysuru

R Ashok reacts on stone pelting on udayagiri police station in mysuru

R Ashok reacts on stone pelting on udayagiri police station in mysuru

Spread the love

R Ashok reacts on stone pelting on udayagiri police station in mysuru

ಬೆಂಗಳೂರು: ಸಿಎಂ ಸಿದ್ದರಾಮಯ್ಯ  ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುವುದರಿಂದ ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌  ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ  ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್‌ ಗಾಂಧಿ, ಕೇಜ್ರಿವಾಲ್‌ ಬಗ್ಗೆ ಪೋಸ್ಟ್‌ ಮಾಡಿದ್ದಾರೆಂಬ ಕಾರಣಕ್ಕೆ ಮತಾಂಧ ಮುಸ್ಲಿಮರು ಫೆ.10ರ ಸಂಜೆ 6-7 ಗಂಟೆ ಸಮಯದಲ್ಲಿ ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಹಿಂದೂ ಸಮುದಾಯದ ಜನರಿಗೆ ಬೆದರಿಕೆ ಹಾಕಿದ್ದು, ಇಡೀ ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದಿದ್ದಾರೆ.

Read this – how did kumbh mela monalisa accepted the movie offer the dairy of Manipur

ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಇದ್ದ ಪ್ರಕರಣಗಳನ್ನು ಸಿದ್ದರಾಮಯ್ಯ ವಾಪಸ್‌ ಪಡೆದಿರುವುದರಿಂದ ಮುಸ್ಲಿಂ ಮತಾಂಧರಿಗೆ ಧೈರ್ಯ ಬಂದಿದೆ. ಜೊತೆಗೆ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು, ಇದು ಮುಸ್ಲಿಮರ ಸರ್ಕಾರ ಎಂದು ಹೇಳಿರುವುದರಿಂದ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಬಹುದು ಎಂಬ ವಿಶ್ವಾಸ ಅವರಿಗೆ ಬಂದಿದೆ. ಒಂದೆಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಹದಗೆಟ್ಟಿದೆ. ಈಗ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದರೂ, ಅದು ವ್ಯರ್ಥ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ. ಮತಬ್ಯಾಂಕ್‌ಗಾಗಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.City Police intensify drunken driving tests - Star of Mysore

Read this – Dedication of Gandhi statue in front of Belgaum Suvarnasoudha

ಮೈಸೂರಿನ ಹಿಂದೂಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮೈಸೂರಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ಈಗಾಗಲೇ ಮಾತಾಡಿದ್ದೇನೆ. ಪೊಲೀಸರು ಕೈ ಚೆಲ್ಲಿ ಕುಳಿತಿರುವುದರಿಂದ ನಾವೇ ಶಾಂತಿ ಕಾಪಾಡಬೇಕಾಗಿದೆ. ನಾನು ಕೂಡ ಮೈಸೂರಿಗೆ ಭೇಟಿ ನೀಡುತ್ತೇನೆ. ಕೆಎಫ್‌ಡಿ, ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಮೈಸೂರಿನಲ್ಲಿ ಸಕ್ರಿಯವಾಗಿವೆ. ಕೇರಳದಿಂದ ಬಂದು ಕೊಲೆ, ಅಪಹರಣ ಮಾಡಿ ಹೋಗಿರುವ ಘಟನೆಗಳು ನಡೆದಿವೆ ಎಂದಿದ್ದಾರೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!