HomeNewsRanji Trophy final 2026 - ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

Ranji Trophy final 2026 – ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.

Ranji Trophy final 2026 – ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

ರಣಜಿ ಟೂರ್ನಿಯ 91ನೇ ಸೀಸನ್​ನ ಫೈನಲ್​ ಪಂದ್ಯ ಶುರುವಾಗಿದೆ. ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ಈ ಬಾರಿಯ ಫೈನಲ್​ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್? - Kannada News |  If ranji final is draw who will win | TV9 Kannada

Read this – Highlights news of the day-ದಿನದ ಪ್ರಮುಖ ಸುದ್ದಿಗಳು

ಮೊದಲ ಇನಿಂಗ್ಸ್ ಆಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಭೋಜನಾ ವಿರಾಮದ ವೇಳೆಗೆ 34 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 104 ರನ್​ ಕಲೆಹಾಕಿದೆ. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿರುವ ಕಾಶ್ಮೀರಿ ಪಡೆ ಮೊದಲ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿದೆ.ಹೀಗೆ ಬೃಹತ್ ಮೊತ್ತ ಪೇರಿಸಿ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ..

  • ರಣಜಿ ಟ್ರೋಫಿ ಫೈನಲ್ ಪಂದ್ಯವು ಡ್ರಾ ಆದಲ್ಲಿ, ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ  ಸಾಧಿಸಿದ ತಂಡವನ್ನು ವಿಜೇತ ಎಂದು ಘೋಷಿಸಲಾಗುತ್ತದೆ.
  • ಒಂದು ವೇಳೆ ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್​ನಲ್ಲಿ 400 ರನ್​ ಕಲೆಹಾಕಿ, ಕರ್ನಾಟಕ ತಂಡ ಮೊದಲ ಇನಿಂಗ್ಸ್​ನಲ್ಲಿ 399 ರನ್​ಗಳಿಸಿ ಪಂದ್ಯ ಡ್ರಾ ಆದರೆ, ಮೊದಲ ಇನಿಂಗ್ಸ್​ನಲ್ಲಿ 1 ರನ್​ಗಳ ಮುನ್ನಡೆ ಹೊಂದಿರುವ ಜಮ್ಮು-ಕಾಶ್ಮೀರ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.
  • ಜಮ್ಮು-ಕಾಶ್ಮೀರ ತಂಡ ಮೊದಲ ಇನಿಂಗ್ಸ್​ನಲ್ಲಿ 400 ರನ್​ಗಳಿಸಿ, ಕರ್ನಾಟಕ ಪ್ರಥಮ ಇನಿಂಗ್ಸ್​ನಲ್ಲಿ 401 ರನ್​ಗಳಿಸಿ ಪಂದ್ಯ ಡ್ರಾನಲ್ಲಿ ಅಂತ್ಯವಾದರೆ, ಮೊದಲ ಇನಿಂಗ್ಸ್​ನಲ್ಲಿ 1 ರನ್​ಗಳ ಮುನ್ನಡೆ ಹೊಂದಿರುವ ಕರ್ನಾಟಕ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆ.

Read this – Baldota Factory Expansion-ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು |Kannada Folks

ರಣಜಿ ಟ್ರೋಫಿ ಫೈನಲ್ ಪಂದ್ಯದ ನಿಯಮಗಳು:
  • ಮೊದಲ ಇನಿಂಗ್ಸ್ ಮುನ್ನಡೆ: ಐದು ದಿನಗಳ ಆಟದ ನಂತರವೂ ಪಂದ್ಯವು ಯಾವುದೇ ಸ್ಪಷ್ಟ ಫಲಿತಾಂಶ ನೀಡದೆ ಡ್ರಾನಲ್ಲಿ ಅಂತ್ಯಗೊಂಡರೆ, ಯಾವ ತಂಡವು ತನ್ನ ಮೊದಲ ಇನಿಂಗ್ಸ್‌ನಲ್ಲಿ ಹೆಚ್ಚಿನ ರನ್ ಗಳಿಸಿರುತ್ತದೆಯೋ ಆ ತಂಡಕ್ಕೆ ಚಾಂಪಿಯನ್ ಪಟ್ಟ ಸಿಗುತ್ತದೆ.
  • ಮೊದಲ ಇನಿಂಗ್ಸ್ ಟೈ: ಒಂದು ವೇಳೆ ಮೊದಲ ಇನಿಂಗ್ಸ್ ಮೊತ್ತವೂ ಸಮನಾಗಿದ್ದರೆ ಅಥವಾ ಮೊದಲ ಇನಿಂಗ್ಸ್ ಪೂರ್ಣಗೊಳ್ಳದಿದ್ದರೆ, ಲೀಗ್ ಹಂತದಲ್ಲಿ ಹೆಚ್ಚಿನ ಅಂಕಗಳನ್ನು (Points) ಗಳಿಸಿದ ತಂಡವನ್ನು ವಿಜೇತ ಎಂದು ಪರಿಗಣಿಸಲಾಗುತ್ತದೆ.
  • ಹಿಂದಿನ ಇತಿಹಾಸ: ಕಳೆದ ವರ್ಷ (2024-25) ವಿದರ್ಭ ತಂಡವು ಕೇರಳ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಆಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಫೈನಲ್ ಪಂದ್ಯದ ಮೊದಲ ಇನಿಂಗ್ಸ್‌ನ ಪ್ರದರ್ಶನವು ಅತ್ಯಂತ ನಿರ್ಣಾಯಕವಾಗಿರುತ್ತದೆ. ಅದರಲ್ಲೂ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ತಂಡಕ್ಕೆ ಬೃಹತ್ ಮೊತ್ತ ಪೇರಿಸಲು ಉತ್ತಮ ಅವಕಾಶವಿದೆ. ಈ ಅವಕಾಶವನ್ನು ಬಳಸಿಕೊಂಡು ಬೃಹತ್ ಮೊತ್ತ ಪೇರಿಸಿದರೆ ಕರ್ನಾಟಕ ತಂಡ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಕರ್ನಾಟಕ ತಂಡವು ಜಮ್ಮು-ಕಾಶ್ಮೀರ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸುವುದು ಅತ್ಯಗತ್ಯ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×