HomeNews'Royal visit' for prisoners at Parappana Agrahara Jail - ಪರಪ್ಪನ ಅಗ್ರಹಾರ

‘Royal visit’ for prisoners at Parappana Agrahara Jail – ಪರಪ್ಪನ ಅಗ್ರಹಾರ

'Royal visit' for prisoners at Parappana Agrahara Jail - ಪರಪ್ಪನ ಅಗ್ರಹಾರ

‘Royal visit’ for prisoners at Parappana Agrahara Jail – ಪರಪ್ಪನ ಅಗ್ರಹಾರಪರಪ್ಪನ ಅಗ್ರಹಾರದಲ್ಲಿನ ಸಮೀಕ್ಷೆಯು ಸುಮಾರು 2.5 ಕಿಮೀ ತ್ರಿಜ್ಯದಲ್ಲಿ ದುರ್ಬಲ ಮೊಬೈಲ್  ಮತ್ತು ವೈಫೈ ಸಿಗ್ನಲ್ ಅನ್ನು ಕಂಡುಹಿಡಿದಿದೆ - ದಿ ಹಿಂದೂ

Read this-Bigg Boss Kannada 12-ಜಾನ್ವಿ ಮಾತಿಗೆ ರಕ್ಷಿತಾ ಶೆಟ್ಟಿ ಖಡಕ್ ಉತ್ತರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮುಖ್ಯ ಅಧೀಕ್ಷಕನನ್ನು ವರ್ಗಾವಣೆಗೊಳಿಸಲಾಗಿದೆ.ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ್ ಅವರು, ಕಾರಾಗೃಹದ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದು, ಕಾರಾಗೃಹದ ಮುಖ್ಯ ಅಧೀಕ್ಷಕರು ಕೆ.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.ಅಲ್ಲದೆ, ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.

Read this-Bigg Boss Kannada 12-ಬಿಗ್ ಬಾಸ್​ಗೆ ಬಂದ ರಕ್ಷಿತಾ ಶೆಟ್ಟಿ ಇಷ್ಟು ದಿನ ಎಲ್ಲಿದ್ರು?

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ. ಇನ್ಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

5 ವರ್ಷಗಳ ನಂತರ ಜೈಲಿನ ಅಧಿಕಾರಿಗಳ ವರ್ಗಾವಣೆ ಕಡ್ಡಾಯವಾಗಲಿದ್ದು, ದೀರ್ಘಕಾಲ ಒಂದೇ ಕಡೆ ಕೆಲಸ ಮಾಡಿದರೆ ಬೇರು ಬಿಡುತ್ತಾರೆ. ಅವರು ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂತವರನ್ನು ಬೇರೆಡೆಗೆ ವರ್ಗಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದ್ದು, ಕೆಪಿಎಸ್​ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು.ಸಹಾಯಕ ಅಧೀಕ್ಷಕರು ಸೇರಿದಂತೆ 1,000 ಸಿಬ್ಬಂದಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಸಿಬ್ಬಂದಿ ಕೊರತೆ ನೀಗಿಸಿದರೆ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಬಹುದು ಎಂದು ತಿಳಿಸಿದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×