Sarigama VG cremated at Chamarajpet crematorium – ಚಾಮರಾಜಪೇಟೆ ಚಿತಾಗಾರದಲ್ಲಿ ನೆರವೇರಿದ ಸರಿಗಮ ವಿಜಿ ಅಂತ್ಯಕ್ರಿಯೆ
ಸ್ಯಾಂಡಲ್ವುಡ್ ನಟ ಸರಿಗಮ ವಿಜಿ ಅಂತ್ಯಕ್ರಿಯೆ ಇಂದು (ಜ.16) ಬಲಿಜ ಸಂಪ್ರದಾಯದಂತೆ ನಡೆಯಿತು. ಚಾಮರಾಜಪೇಟೆ ಚಿತಾಗಾರದಲ್ಲಿ ನಟನ ಕಾರ್ಯ ನೆರವೇರಿದೆ. ಹಿರಿಯ ಪುತ್ರ ರೋಹಿತ್ ಅವರು ತಂದೆ ಸರಿಗಮ ವಿಜಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದರು.
Read this – Cabinet approves constitution of 8th Pay Commission 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ
ಇನ್ನೂ ರವೀಂದ್ರ ಕಲಾಕ್ಷೇತ್ರದಲ್ಲಿ ನಟನ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಜಯೇಂದ್ರ, ಚಲವಾದಿ ನಾರಾಯಣಸ್ವಾಮಿ, ನಟ ಧ್ರುವ ಸರ್ಜಾ, ಹಿರಿಯ ನಟ ಸುಂದರ್ ರಾಜ್, ರಮೇಶ್ ಭಟ್, ಶ್ರೀನಿವಾಸ್ ಮೂರ್ತಿ, ನಟಿ ರೂಪಿಕಾ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದರು.
Read this – CM Siddaramaiah Assembly Session ಸಿಎಂ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನ
ಇನ್ನೂ ಕೆಲವು ದಿನಗಳಿಂದ ಸರಿಗಮ ವಿಜಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ 1 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ (ಜ.15) ಚಿಕಿತ್ಸೆ ಫಲಕಾರಿಯಾಗದೇ ಸರಿಗಮ ವಿಜಿ ನಿಧನರಾಗಿದ್ದಾರೆ.