HomeNewsSC Clears Hindu Prayers at Disputed Bhojshala Site - ಧಾರ್‌- ಭೋಜ್‌ಶಾಲಾ ವಿವಾದ...

SC Clears Hindu Prayers at Disputed Bhojshala Site – ಧಾರ್‌- ಭೋಜ್‌ಶಾಲಾ ವಿವಾದ |Kannada Folks

ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. 11ನೇ ಶತಮಾನದ ಈ ಸ್ಮಾರಕವನ್ನು ಹಿಂದೂಗಳು ದೇವಿ ಸರಸ್ವತಿಯ ದೇವಸ್ಥಾನವೆಂದು ಪರಿಗಣಿಸುತ್ತಾರೆ

SC Clears Hindu Prayers at Disputed Bhojshala Site – ಧಾರ್‌- ಭೋಜ್‌ಶಾಲಾ ವಿವಾದ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲಾ ಸಂಕೀರ್ಣದಲ್ಲಿ ಬಸಂತ್ ಪಂಚಮಿಯ ದಿನದಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. 11ನೇ ಶತಮಾನದ ಈ ಸ್ಮಾರಕವನ್ನು ಹಿಂದೂಗಳು ದೇವಿ ಸರಸ್ವತಿಯ ದೇವಸ್ಥಾನವೆಂದು ಪರಿಗಣಿಸುತ್ತಾರೆ. ಆದರೆ, ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದ್ ಎಂದು ಭಾವಿಸುತ್ತಾರೆ.ಧಾರ್‌- ಭೋಜ್‌ಶಾಲಾ ವಿವಾದ: ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ 'ಸುಪ್ರೀಂ' ಅವಕಾಶ

Read this – Major Anti-Naxal Operation: 15 Maoists Killed in Jharkhand  ಜಾರ್ಖಂಡ್ |Kannada Folks

ಈ ವಿವಾದಿತ ಸ್ಥಳದಲ್ಲಿ ಸಾಮಾನ್ಯವಾಗಿ ಹಿಂದೂಗಳು ಪ್ರತಿ ಮಂಗಳವಾರ ಮತ್ತು ಬಸಂತ ಪಂಚಮಿಯಂದು ಪೂಜೆ ಸಲ್ಲಿಸಬಹುದು. ಮುಸ್ಲಿಮರು ಶುಕ್ರವಾರಗಳಂದು ಮಧ್ಯಾಹ್ನ 1 ರಿಂದ 3 ಗಂಟೆಯ ವರೆಗೆ ನಮಾಜ್ ಸಲ್ಲಿಸಬಹುದು.

ಆದರೆ, ಈ ವರ್ಷ ಬಸಂತ ಪಂಚಮಿ ಶುಕ್ರವಾರಕ್ಕೆ ಬಂದಿರುವ ಹಿನ್ನೆಲೆ ಸ್ಪಷ್ಟತೆಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಿಲ್ಲಾಡಳಿತವು ಎರಡೂ ಸಮುದಾಯಗಳ ಪ್ರಾರ್ಥನೆಗಳು ಶಾಂತಿಯುತವಾಗಿ ನಡೆಯಲು ಸೂಕ್ತ ಕಾನೂನು ಸುವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚಿಸಿದೆ.ಮುಸ್ಲಿಂ ಸಮುದಾಯದಿಂದ ಎಷ್ಟು ಜನ ನಮಾಜ್‌ಗೆ ಬರುವರೆಂಬ ಮಾಹಿತಿಯನ್ನು ಮುಂಚಿತವಾಗಿ ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದೂ ನಿರ್ದೇಶನ ನೀಡಲಾಗಿದೆ.

Read this – Vijay ahead of 2026 tamil nadu assembly polls  2026 ತಮಿಳುನಾಡು ವಿಧಾನಸಭಾ ಚುನಾವಣೆ |Kannada Folks

ಏಪ್ರಿಲ್ 7, 2003 ರಂದು ASI ಮಾಡಿದ ವ್ಯವಸ್ಥೆಯಡಿಯಲ್ಲಿ, ಹಿಂದೂಗಳು ಮಂಗಳವಾರದಂದು ಭೋಜಶಾಲೆಯ ಆವರಣದಲ್ಲಿ ಪೂಜೆ ಸಲ್ಲಿಸುತ್ತಾರೆ ಮತ್ತು ಶುಕ್ರವಾರದಂದು ಮುಸ್ಲಿಮರು ಸಂಕೀರ್ಣದಲ್ಲಿ ‘ನಮಾಜ್’ ಮಾಡುತ್ತಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×