Homeಕನ್ನಡ ಫೊಕ್ಸ್Sharanu Sharanayya Lyrics in Kannada - ಶರಣು ಶರಣಯ್ಯ ಶರಣು ಬೆನಕ

Sharanu Sharanayya Lyrics in Kannada – ಶರಣು ಶರಣಯ್ಯ ಶರಣು ಬೆನಕ

Ganesha Songs

Sharanu Sharanayya Lyrics in Kannada

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೋ ನಮ್ಮ ಕರಿಮುಖ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಗರಿಕೆ ತಂದರೆ ನೀನು… ಕೊಡುವೆ ವರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೋ ಮುನ್ನ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓದುವುದು ಭೀತಿ
ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓದುವುದು ಭೀತಿ
ನೀಡಯ್ಯ ಕಷ್ಟಗಳ ಗೆಲ್ಲುವ ಶಕುತಿ
ತೊರಯ್ಯ ನಮ್ಮಲ್ಲಿ ನಿನ್ನಯ ಪ್ರೀತಿ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೋ ನಮ್ಮ ಕರಿಮುಖ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಬೆನಕ ಬೆನಕ ಏಕದಂತ
ಪಚ್ಚೆ ಕಲ್ಲು ಪಾಣಿ ಮೆಟ್ಲು
ಒಪ್ಪುವ ವಿಚ್ಛೇಶ್ವರ ನಿನಗೆ
ಇಪ್ಪತ್ರೋರು ನಮಸ್ಕಾರಗಳು

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
Banu Mitra
Banu Mitrahttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

Leave a Reply

- Advertisment -

Most Popular

Recent Comments