Shivanand Neelannavar – ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ರೂ. ಕೋಟಿ ವಂಚನೆ; ಶಿವಾನಂದ ನೀಲಣ್ಣನವರ್ ಬಂಧನ, ಆಸ್ತಿ ಜಪ್ತಿ ಶುರು
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ ಮಾಲೀಕ ಶಿವಾನಂದ ನೀಲಣ್ಣನವರ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದು, ಆಸ್ತಿ ಜಪ್ತಿ ಪ್ರಕ್ರಿಯೆ ಆರಂಭಿಸಿದ್ದಾರೆ. ಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಿವಾನಂದ್ ನೀಲಣ್ಣನವರ್, ಆರ್ಬಿಐ ಅಥವಾ ಸೆಬಿಯಿಂದ ಯಾವುದೇ ಅನುಮೋದನೆಗಳಿಲ್ಲದೆ, ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಸಾವಿರಾರು ಕೋಟಿ ರೂ. ಹಣವನ್ನು ಹೂಡಿಕೆದಾರರಿಂದ ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬ್ರಾವ್ ಅವರು, ಶಿವಂ ಅಸೋಸಿಯೇಟ್ಸ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.
ವಿಚಾರಣೆಯ ಆಧಾರದ ಮೇಲೆ, ಶುಕ್ರವಾರ ಸಂಜೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಸಂಬಂಧ ಕೆಪಿಐಡಿ (ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ) ಕಾಯ್ದೆ ಮತ್ತು ಬಡ್ಸ್ (ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.
ನಿನ್ನೆ ಬೆಳಗಾವಿಯ ಶಿವಬಸವನಗರದಲ್ಲಿರುವ ಕಚೇರಿ ಸೇರಿದಂತೆ ಎರಡು ಕಡೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದರು. ಕಚೇರಿಗಳಲ್ಲಿದ್ದ ಹಣಕಾಸು ವ್ಯವಹಾರಗಳ ದಾಖಲೆಗಳು, ಹೂಡಿಕೆ ವಿವರಗಳು, ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣದ ಮಾಹಿತಿ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಬಳಿಕ ಇಂದು ಶಿವಾನಂದ ನೀಲಣ್ಣನವರ್ ವಿರುದ್ಧ ಐಎಫ್ಐಆರ್ ದಾಖಲಿಸಿದ್ದು, ಇದೀಗ ಮಾಳಮಾರುತಿ ಠಾಣೆ ಪೊಲೀಸರು ಶಿವಾನಂದ ನೀಲಣ್ಣನವರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Read here: Renukaswamy Probe Case Filed-ದರ್ಶನ್ ಕೇಸ್ನಲ್ಲಿ ಸ್ಪೋಟಕ ಟ್ವಿಸ್ಟ್!
“ಆರೋಪಿ ಮಾಲೀಕರನ್ನು ಸುರಕ್ಷಿತವಾಗಿರಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ತನಿಖೆಗಾಗಿ ಪೊಲೀಸರು, ತಮ್ಮ ಕಸ್ಟಡಿಗೆ ಕೋರಲಿದ್ದಾರೆ” ಎಂದು ಗುಲಾಬ್ರಾವ್ ತಿಳಿಸಿದ್ದಾರೆ. ನಕಲಿ ಆಸ್ತಿ ದಾಖಲೆ ಬಳಸಿ 15 ಬ್ಯಾಂಕ್ಗಳಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪ: ದಂಪತಿ ವಿರುದ್ಧ ಎಂಟು FIR ದಾಖಲು ಮೇಲ್ನೋಟಕ್ಕೆ, ಸುಮಾರು 35,000 ಜನರು ಸಂಸ್ಥೆಯಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆಂದು ನಂಬಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಈ ಸಂಸ್ಥೆಯು ಆರ್ಬಿಐ ಅಥವಾ ಸೆಬಿಯಲ್ಲಿ ನೋಂದಾಯಿಸಲಾಗಿಲ್ಲ. ಈ ಹಂತದಲ್ಲಿ, ಹೂಡಿಕೆದಾರರ ನಿಖರ ಸಂಖ್ಯೆ ಮತ್ತು ಒಳಗೊಂಡಿರುವ ಒಟ್ಟು ಮೊತ್ತವನ್ನು ದೃಢೀಕರಿಸಲು ಸಾಧ್ಯವಿಲ್ಲ. ಆದಾಗ್ಯೂ, ಇದು ಬಹುಕೋಟಿ ವಂಚನೆ ಪ್ರಕರಣ ಎಂದು ಶಂಕಿಸಲಾಗಿದೆ. ವಿವರವಾದ ಲೆಕ್ಕಪರಿಶೋಧನೆಯ ನಂತರವೇ ನಿಖರವಾದ ಅಂಕಿಅಂಶಗಳನ್ನು ಕಂಡುಹಿಡಿಯಬಹುದು ಎಂದು ಅವರು ಹೇಳಿದ್ದಾರೆ.
ಆಸ್ತಿ ಜಪ್ತಿ ಆರಂಭ
ಆರೋಪಿಗೆ ಸಂಬಂಧಿಸಿದ ಆಸ್ತಿ ಹಾಗೂ ದಸ್ತಾ ವೇಜುಗಳ ಜಪ್ತಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕಳೆದ ಎರಡು ದಿನಗಳಿಂದ ಉಪ ವಿಭಾಗಾಧಿಕಾರಿ ಶ್ರವಣ್ ನಾಯಕ್, ಸಹಕಾರ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ವೇಳೆ ಶಿವಾನಂದ ನೀಲಣ್ಣನವರ್ 35 ಸಾವಿರ ಜನರಿಂದ ವಾರ್ಷಿಕ ಶೇ. 36 ರಷ್ಟು ಬಡ್ಡಿ ನೀಡುವ ಆಮಿಷವೊಡ್ಡಿ ಸುಮಾರು 4,500 ಕೋಟಿ ರೂ.ಗಳನ್ನು ವಸೂಲಿ ಮಾಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. 2020ರಲ್ಲಿ ಶಿವಂ ಅಸೋಸಿಯೇಟ್ ನೋಂದಣಿಯಾಗಿದ್ದು, ಆಕ್ಯೂಮೆನ್ ಆಪ್ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


