Shocked and deeply saddened by the death of dcm ajit pawar – ಅಜಿತ್ ಪವಾರ್ ಸಾವು ಆಘಾತಕಾರಿ
ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Highlights news of the day-ದಿನದ ಪ್ರಮುಖ ಸುದ್ದಿಗಳು
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿಮಾಡಿದ್ದೇ” ಎಂದರು.
“ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು” ಎಂದರು.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us