HomeNewsSmriti Mandhana 11 50+ vs AUS-ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana 11 50+ vs AUS-ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana sets a remarkable record with 11 fifty-plus scores against Australia in ODIs

Smriti Mandhana 11 50+ vs AUS-ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ

Australia Women vs India Women: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಹಾಫ್ ಸೆಂಚುರಿಯೊಂದಿಗೆ ಸ್ಮೃತಿ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಅಲ್ಲದೆ ಕೇವಲ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಹಾಫ್ ಸೆಂಚುರಿಯೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಈ ಅರ್ಧಶತಕದೊಂದಿಗೆ ಸ್ಮೃತಿ ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಅಲ್ಲದೆ ಕೇವಲ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಹಾಫ್ ಸೆಂಚುರಿಯೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಸ್ಮೃತಿ ಮಂಧಾನ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 22 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಆಸೀಸ್ ಪಡೆ ವಿರುದ್ಧ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಮಿಥಾಲಿ ರಾಜ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ 2ನೇ ಭಾರತೀಯ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಸ್ಮೃತಿ ಈವರೆಗೆ ಆಸೀಸ್ ವಿರುದ್ಧ 1,078 ರನ್ ಕಲೆಹಾಕಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಬಾರಿಸಿದ 58 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ 48.3 ಓವರ್​ಗಳಲ್ಲಿ 214 ರನ್​ಗಳಿಸಿ ಆಲೌಟ್ ಆಗಿದೆ. ಅದರಂತೆ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 215 ರನ್​ಗಳ ಗುರಿ ಪಡೆದುಕೊಂಡಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×