HomeNewsStudents Protest Shivakumar-ಸರ್ಕಾರಿ ಉದ್ಯೋಗ ಭರ್ತಿ ಹಾಕ್ತಿಲ್ಲ |Kannada Folks

Students Protest Shivakumar-ಸರ್ಕಾರಿ ಉದ್ಯೋಗ ಭರ್ತಿ ಹಾಕ್ತಿಲ್ಲ |Kannada Folks

Students demand govt jobs Shivakumar responds

Students Protest Shivakumar-ಸರ್ಕಾರಿ ಉದ್ಯೋಗ ಭರ್ತಿ ಹಾಕ್ತಿಲ್ಲ

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.50 ಸಾವಿರ ಶಿಕ್ಷಕರ ನೇಮಕಾತಿ,50 ಸಾವಿರ ಶಿಕ್ಷಕರು ಸೇರಿ 2 ಲಕ್ಷ ಸರ್ಕಾರಿ ಹುದ್ದೆಗಳ  ಭರ್ತಿ ಮಾಡ್ತೇವೆ; ಸಮಯ ನಿಗದಿ ಮಾಡಿಕೊಂಡಿದ್ದೇವೆ - ಡಿಕೆ ಶಿವಕುಮಾರ್ - we will fill 2  ...

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್‌ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆಗಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ ಬೆಲ್ಲದ್‌, ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು. ನಗರದ ಶ್ರೀನಗರ ವೃತ್ತದಿಂದ ಆರಂಭವಾದ ಪ್ರತಿಭಟನೆ ಮಧ್ಯಭಾಗದಲ್ಲಿ ಹಾದುಬರುತ್ತಿದ್ದಂತೆ ಅವರನ್ನು ತಡೆಯಲು ಯತ್ನಿಸಿದಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟ, ನೂಕಾಟ ನಡೆಯಿತು. ಇನ್ನು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಉದ್ಯೋಗ ಸಿಗದಿದ್ದಕ್ಕೆ ನಾವು ಗ್ಯಾರಂಟಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ ಎಂದು ಹೇಳಿದರು.

ರೊಚ್ಚಿಗೆದ್ದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹಸಚಿವ ಡಾ.ಜಿ.ಪರಮೇಶ್ವರ್‌, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರ ಭಾವಚಿತ್ರಗಳನ್ನು ರಸ್ತೆ ಮಧ್ಯೆಯೇ ಧರಣಿ ಕುಳಿತು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಪೊಲೀಸರ ಅನುಮತಿಯನ್ನು ನಿರಾಕರಿಸಿ ಶ್ರೀನಗರ ವೃತ್ತದಿಂದ ವಿಚಿಗನ್‌ ಕಾಂಪೌಂಡ್‌ ನವರೆಗೆ ಪ್ರತಿಭಟನೆ ನಡೆಸಲು ಮುಂದಾದಾಗ ಭಾರೀ ನೂಕಾಟ ಉಂಟಾಯಿತು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×