Suraj Revanna – ಸೂರಜ್ ರೇವಣ್ಣ: ಕ್ಲೀನ್ ಚಿಟ್ ರದ್ದು, ಮರು ತನಿಖೆ

Read this-Rajinikanth Inspires Rishab; Kantara Crowned ರಾಜಿನಿಕಾಂತ್ ರಿಷಬ್‌ಗೆ ಪ್ರೇರಣೆ
ಪರಿಚಯಸ್ಥ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಪ್ರಕರಣದಲ್ಲಿವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ‘ಕ್ಲೀನ್ ಚಿಟ್’ ನೀಡಿದ್ದ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ತಿರಸ್ಕರಿಸಿರುವ ನ್ಯಾಯಾಲಯ ಮರು ತನಿಖೆಗೆ ಆದೇಶಿಸಿದೆ.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯವೆಸಗಿ ಬೆದರಿಕೆಯೊಡ್ಡಿದ್ದಾರೆ ಎಂದು ಯುವಕನೊಬ್ಬ ನೀಡಿದ್ದ ಪ್ರಕರಣವನ್ನು 2024ರ ಜೂನ್‌ನಲ್ಲಿ ಸಿಐಡಿ ಎಸ್‌ಐಟಿ ತನಿಖೆ ನಡೆಸಿತ್ತು. ತನಿಖೆ ಆರಂಭದಲ್ಲಿಸೂರಜ್ ಅವರನ್ನು ಬಂಧಿಸಿ ಜೈಲಿಗೆ ಕಳಿಸಿತ್ತು. ತನಿಖೆ ಪೂರ್ಣಗೊಳಿಸಿ 2025ರ ಜೂನ್‌ನಲ್ಲಿಆರೋಪಿ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲಎಂದು ಷರಾ ಬರೆದು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿತ್ತು.
Read this-PM Modi in Udupi ಉಡುಪಿಯಲ್ಲಿ ಮೋದಿ ರೋಡ್ ಶೋ
ಡಿ.29ರವರೆಗೂ ಗಡುವು ನೀಡಿದ ಕೋರ್ಟ್
ಎಸ್‌ಐಟಿ ‘ಬಿ’ ರಿಪೋರ್ಟ್ ತಿರಸ್ಕರಿಸಿರುವ 42ನೇ ಎಸಿಜೆಎಂ ನ್ಯಾಯಾಲಯ , ಪ್ರಕರಣದ ಮರು ತನಿಖೆ ನಡೆಸಿ ಡಿ.29ರೊಳಗೆ ವರದಿ ನೀಡುವಂತೆ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
2024ರ ಜೂನ್ 22ರಂದು ಸೂ ಸಂತ್ರಸ್ತ ವ್ಯಕ್ತಿಯೊಬ್ಬ ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ. ಆರಂಭದಲ್ಲಿ ಸಂತ್ರಸ್ತರು ಹಾಸನ ಜಿಲ್ಲಾ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು. ಆದರೆ, ಆ ನಂತರ ಪ್ರಕರಣವನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಅಲ್ಲಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾದ ನಂತರ, ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
Read this-High Court Nod for Shanth Kumar – ಹೈಕೋರ್ಟ್ ಅನುಮತಿ
ದೂರು ಪ್ರತಿ ದೂರು ದಾಖಲು
ಮತ್ತೊಂದೆಡೆ, ಈ ಪ್ರಕರಣದಲ್ಲಿ ಹಣಕ್ಕಾಗಿ ಪೀಡಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಎಂಬುವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ದೂರುದಾರ ವ್ಯಕ್ತಿಯು ಸುಳ್ಳು ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿ, 5 ಕೋಟಿ ರೂ. ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು.
Support Us 


