HomeNewsT20 WC 2026 POTM-ಪೋಟಿ 8 ಆಟಗಾರರು |Kannada Folks

T20 WC 2026 POTM-ಪೋಟಿ 8 ಆಟಗಾರರು |Kannada Folks

List of 8 Top Contenders

T20 WC 2026 POTM-ಪೋಟಿ 8 ಆಟಗಾರರು

T20 World Cup 2026: ಟಿ20 ವಿಶ್ವಕಪ್​ನ ಪ್ಲೇಯರ್ ಆಫ್ ದಿ ಟೂರ್ನಮೆಂಟ್​ ಪ್ರಶಸ್ತಿಗೆ 8 ಆಟಗಾರರು ನಾಮನಿರ್ದೇಶಿತರಾಗಿದ್ದಾರೆ. ಈ ಎಂಟು ಆಟಗಾರರಲ್ಲಿ ಏಕೈಕ ಭಾರತೀಯ ಕಾಣಿಸಿಕೊಂಡಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ಓರ್ವ, ನ್ಯೂಝಿಲೆಂಡ್ ತಂಡದ ಇಬ್ಬರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 8 ಆಟಗಾರರ ಪಟ್ಟಿ ಪ್ರಕಟ - Kannada News |  T20 World Cup 2026 Player of the Tournament nominees list | TV9 Kannada

Read this : Auqib Nabi Dominates Ranji Trophy ಭಾರತ ಆಯ್ಕೆಯ ಸುಳಿವು ನೀಡಿದ ಬಿಸಿಸಿಐ

T20 World Cup 2026: ಟಿ20 ವಿಶ್ವಕಪ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಮಾರ್ಚ್ 8 ರಂದು ನಡೆಯಲಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯದೊಂದಿಗೆ ವಿಶ್ವಕಪ್​ಗೆ ತೆರೆ ಬೀಳಲಿದೆ. ಅದಕ್ಕೂ ಮುನ್ನ ಈ ಬಾರಿಯ ಟೂರ್ನಿಯ ಶ್ರೇಷ್ಠ ಆಟಗಾರನ ಪ್ರಶಸ್ತಿಗೆ ನಾಮನಿರ್ದೇಶನವಾಗಿರುವ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ 8 ಆಟಗಾರರಲ್ಲಿ ಒಬ್ಬರು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿರುವ ಆಟಗಾರರು ಈ ಕೆಳಗಿನಂತಿದೆ..

ವಿಲ್ ಜ್ಯಾಕ್ಸ್: ಇಂಗ್ಲೆಂಡ್​ ತಂಡದ ಆಲ್​ರೌಂಡರ್ ವಿಲ್ ಜ್ಯಾಕ್ಸ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜ್ಯಾಕ್ಸ್ ಈ ಬಾರಿಯ ವಿಶ್ವಕಪ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 9 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 226 ರನ್​ಗಳನ್ನು ಕಲೆಹಾಕಿದ್ದಾರೆ.

ಸಾಹಿಬ್​ಝಾದ ಫರ್ಹಾನ್: ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ ಕೂಡ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸುತ್ತಿನಲ್ಲಿದ್ದಾರೆ. ಪಾಕ್ ಪರ 7 ಪಂದ್ಯಗಳನ್ನಾಡಿದ್ದ ಸಾಹಿಬ್​ 160ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 383 ರನ್​ ಕಲೆಹಾಕಿದ್ದಾರೆ.

ಲುಂಗಿ ಎನ್‌ಗಿಡಿ: ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಈ ಬಾರಿಯ ವಿಶ್ವಕಪ್​ನಲ್ಲಿ 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದು ಈ ವೇಳೆ 7.19 ಎಕಾನಮಿಯಲ್ಲಿ ರನ್ ನೀಡಿ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

ಟಿಮ್ ಸೈಫರ್ಟ್: ನ್ಯೂಝಿಲೆಂಡ್ ತಂಡದ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ  161.17ರ ಸ್ಟ್ರೈಕ್ ರೇಟ್​ನಲ್ಲಿ 274 ರನ್​ಗಳನ್ನು ಕಲೆಹಾಕಿದ್ದಾರೆ.

ಶ್ಯಾಡ್ಲಿ ವ್ಯಾನ್ ಶಾಲ್ಕ್‌ವಿಕ್: ಯುಎಸ್​ಎ ತಂಡದ ವೇಗಿ ಶ್ಯಾಡ್ಲಿ ವ್ಯಾನ್ ಶಾಲ್ಕ್‌ವಿಕ್ ಈ ಬಾರಿಯ ವಿಶ್ವಕಪ್​ನಲ್ಲಿ ಆಡಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಈ ವೇಳೆ 6.80 ಎಕಾನಮಿಯಲ್ಲಿ ರನ್ ನೀಡಿ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿದ್ದಾರೆ ಎಂಬುದೇ ವಿಶೇಷ.

ರಚಿನ್ ರವೀಂದ್ರ: ನ್ಯೂಝಿಲೆಂಡ್ ತಂಡದ ಯುವ ಆಲ್​ರೌಂಡರ್ ರಚಿನ್ ರವೀಂದ್ರ ಈವರೆಗೆ ಆಡಿದ 8 ಪಂದ್ಯಗಳಿಂದ ಒಟ್ಟು 11 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 128 ರನ್​ಗಳನ್ನು ಕಲೆಹಾಕಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

ಐಡೆನ್ ಮಾರ್ಕ್ರಾಮ್: ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಈ ಬಾರಿಯ ವಿಶ್ವಕಪ್​ನಲ್ಲಿ 8 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಬ್ಯಾಟಿಂಗ್ ಮೂಲಕ 286 ರನ್ ಕಲೆಹಾಕಿದರೆ, ಬೌಲಿಂಗ್ ಮೂಲಕ ಒಂದು ವಿಕೆಟ್ ಪಡೆದಿದ್ದಾರೆ.

ಸಂಜು ಸ್ಯಾಮ್ಸನ್: ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಈ ಬಾರಿಯ ವಿಶ್ವಕಪ್​ನಲ್ಲಿ ಆಡಿರುವುದು ಕೇವಲ 4 ಮ್ಯಾಚ್​ಗಳನ್ನು ಮಾತ್ರ. ಈ ವೇಳೆ 201ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 232 ರನ್ ಕಲೆಹಾಕಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments