The case is in the court, not talking about it: Ramya – ಕೋರ್ಟ್ನಲ್ಲಿದೆ ಇದರ ಬಗ್ಗೆ ಮಾತನಾಡಲ್ಲ: ರಮ್ಯಾ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ಕುರಿತು ಕೋರ್ಟ್ ವಿಚಾರಣೆಯ ಬಳಿಕ ಮಾಧ್ಯಮಕ್ಕೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ಕೋರ್ಟ್‌ನಲ್ಲಿದೆ ಈಗ ಇದರ ಬಗ್ಗೆ ಏನು ಮಾತನಾಡಲ್ಲ ಎಂದು ನಟಿ ಮಾತನಾಡಿದ್ದಾರೆ.
ಕೋರ್ಟ್ ವಿಚಾರಣೆಯ ಬಳಿಕ ರಮ್ಯಾ ಮಾತನಾಡಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೆಲ ದಾಖಲೆಗಳನ್ನು ನೀಡಲು ಹೇಳಿತ್ತು. ಅವರು ಕೇಳಿದ್ದ ಎಲ್ಲಾ ದಾಖಲೆಗಳನ್ನು ಕೊಟ್ಟಿದ್ದೇನೆ. ನೇರವಾಗಿ ಬಂದು ಕೊಡೋಕೆ ಹೇಳಿದ್ದರು. ಹಾಗಾಗಿ ವಿಚಾರಣೆಗೆ ಬಂದಿದ್ದೇನೆ. ಈ ಪ್ರಕರಣ ಕೋರ್ಟ್‌ನಲ್ಲಿರುವ ಕಾರಣಕ್ಕೆ ಹೆಚ್ಚೇನು ಮಾತನಾಡಲ್ಲ ಎಂದು ಮಾತನಾಡಿದ್ದಾರೆ. ಇದೇ ವೇಳೆ, ಮತ್ತೆ ಸಿನಿಮಾ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಒಳ್ಳೆಯ ಕಥೆ ಸಿಕ್ಕರೆ ಆದಷ್ಟು ಬೇಗ ಬರುತ್ತೇನೆ ಎಂದು ರಮ್ಯಾ ಮಾತನಾಡಿದ್ದಾರೆ.
Read this – Renewable Energy Market 2031: Trends, Challenges, and Opportunities
ಅಂದಹಾಗೆ, ಜನವರಿ 15ಕ್ಕೆ ಒರಿಜಿನಲ್ ಅಗ್ರಿಮೆಂಟ್ ಕಾಪಿ ಜೊತೆಗೆ ಕೋರ್ಟ್‌ಗೆ ಬರಲು ರಮ್ಯಾಗೆ ಸೂಚನೆ ನೀಡಲಾಗಿದೆ.ಇನ್ನೂ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದರು. 1 ಕೋಟಿ ರೂ. ಪರಿಹಾರ ಕೇಳಿ ನಟಿ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ.