Top Devotional stories of Ayyappa Swamy Chapter 3 – ಅಯ್ಯಪ್ಪ ಸ್ವಾಮಿಯ ಕಥೆ
7.ಪತ್ನಿಯ ಆರೋಗ್ಯದತ್ತ ತಲೆಕೆಡಿಸಿಕೊಂಡ ರಾಜ:
Read previous-Top Devotional stories of Ayyappa Swamy Chapter 2 – ಅಯ್ಯಪ್ಪ ಸ್ವಾಮಿಯ ಕಥೆ
ಪುತ್ರ ಪ್ರೀತಿಯಿಂದ ಮಂದವಾಗಿದ್ದ ರಾಣಿ ಮಂತ್ರಿಯ ಮಾತುಗಳನ್ನು ನಂಬಿದಳು. ಆತನು ಸೂಚಿಸಿದಂತೆ, ಘೋರ ತಲೆನೋವಿನಿಂದ ಬಳಲುತ್ತಿರುವುದಾಗಿ ರಾಜನನ್ನು ನಂಬಿಸಿದಳು. ಭ್ರಮೆಗೊಳಗಾದ ರಾಜನು ಅರಮನೆಯ ವೈದ್ಯನನ್ನು ಕರೆಸಿದನು. ಎಷ್ಟು ಕಷ್ಟಪಟ್ಟರೂ ರಾಣಿಯ ಕಾಯಿಲೆ ಯಾವುದೆಂದು ತಿಳಿದುಕೊಳ್ಳಲು ಅರಮನೆಯ ವೈದ್ಯನಿಂದ ಸಾಧ್ಯವಾಗಲಿಲ್ಲ. ಆಗ ಮಂತ್ರಿಯು ತಾನು ನಿಯೋಜಿಸಿದ ವೈದ್ಯನನ್ನು ಅರಮನೆಗೆ ಕರೆದುಕೊಂಡು ಬರುತ್ತಾನೆ. ರಾಣಿಯನ್ನು ಪರೀಕ್ಷಿಸಿದಂತೆ ನಟಿಸಿದ ಆ ವೈದ್ಯನು ಹುಲಿಯ ಹಾಲಿನಿಂದ ಮಾತ್ರವೇ ರಾಣಿಯ ರೋಗ ಶಮನಗೊಳ್ಳುವುದೆಂದು ಸೂಚಿಸಿದನು. ರಾಣಿಯ ಕಾಯಿಲೆಯನ್ನು ಗುಣಪಡಿಸಿದವರಿಗೆ ಅರ್ಧರಾಜ್ಯವನ್ನೇ ಕೊಡುವುದಾಗಿ ರಾಜನು ಡಂಗುರ ಸಾರಿಸಿದನು. ಹುಲಿಯ ಹಾಲು ಸಂಗ್ರಹಿಸುವ ಸಲುವಾಗಿ ಕಾಡಿಗೆ ಹೋದ ಸೈನಿಕರು ಬರಿಗೈಯಲ್ಲಿ ಹಿಂತಿರುಗಿದರು. ಯಾರಿಗೂ ಕೂಡ ಹುಲಿಯ ಹಾಲನ್ನು ತರಲು ಸಾಧ್ಯವಾಗಲಿಲ್ಲ.
8.ಹುಲಿ ಹಾಲಿಗಾಗಿ ಕಾಡಿಗೆ ಹೊರಟ ಮಣಿಕಂಠ:
Read this-Ayyappa Sharanu Gosha- ಅಯ್ಯಪ್ಪ ಶರಣು ಘೋಷ Swamiye Sharanam Iyyappa
ಮಣಿಕಂಠನು ಹುಲಿಯ ಹಾಲು ತರುವ ಸಲುವಾಗಿ ಹೊರಡಲು ಸಿದ್ಧನಾದನು ಆದರೆ ರಾಜ ರಾಜಶೇಖರನು ಇದಕ್ಕೆ ಒಪ್ಪುವುದಿಲ್ಲ. ತನ್ನ ಕುಟುಂಬಕ್ಕಾಗಿ ಒಂದು ಸಹಾಯವನ್ನು ಮಾಡಲು ಅನುಮತಿ ನೀಡಬೇಕೆಂದು ಮಣಿಕಂಠನು ತಂದೆಯನ್ನು ಒತ್ತಾಯಿಸಿದನು. ಮಗನ ಮಾತಿಗೆ ಕಟ್ಟುಬಿದ್ದ ರಾಜನು ಮಣಿಕಂಠನನ್ನು ಕಾಡಿಗೆ ಕಳುಹಿಸಲು ಒಪ್ಪಿಗೆ ಸೂಚಿಸುತ್ತಾನೆ. ಮಣಿಕಂಠನ ನೆರವಿಗಾಗಿ ಸಾಹಸಿಗಳಾದ ಭಟರ ಒಂದು ತಂಡವನ್ನು ಅವನೊಂದಿಗೆ ಕಾಡಿಗೆ ಕಳಿಸಲು ಅರಸನು ತೀರ್ಮಾನಿಸಿದನು. ಆದರೆ ಜನರ ಗುಂಪುಗಳನ್ನು ಕಂಡೊಡನೆ ಹುಲಿಯು ಓಡಿ ಹೋಗುವುದೆಂಬ ಕಾರಣದಿಂದ ಮಣಿಕಂಠನು ತಂದೆಯ ತೀರ್ಮಾನವನ್ನು ಒಪ್ಪಲಿಲ್ಲ. ಕೊನೆಗೆ ವಾತ್ಸಲ್ಯಮಯಿಯಾದ ತಂದೆಯು ಆಹಾರ ಸಾಮಗ್ರಿಗಳನ್ನೂ ಶಿವಭಕ್ತಿಯ ಸೂಚಕವಾದ ಹಾಗೂ ಮೂರು ಕಣ್ಣುಗಳಿರುವ ತೆಂಗಿನಕಾಯಿಯನ್ನೂ ಇತ್ತು ಮಗನನ್ನು ಕಳಿಸಿಕೊಟ್ಟನು.
9.ಮಹಿಷಿ ಮತ್ತು ಮಣಿಕಂಠನ ನಡುವೆ ಘೋರ ಯುದ್ಧ:
![]()
Read this-Story of Ayyappa Swamy – ಅಯ್ಯಪ್ಪ ಸ್ವಾಮಿಯ ಕಥೆ – Chapter 2 ಪಂದಳ ರಾಜನ ಸಂರಕ್ಷಣೆಯಲ್ಲಿ
ಮಣಿಕಂಠನು ಅರಣ್ಯವನ್ನು ಪ್ರವೇಶಿಸಿದಾಗ ಭಗವಾನ್ ಶಿವನ ಪಂಚಭೂತಗಣಗಳೂ ಒಟ್ಟಿಗೆ ಸೇರಿಕೊಂಡವು. ಪಯಣದ ನಡುವೆ ದೇವಲೋಕದಲ್ಲಿ ಮಹಿಷಿಯು ನಡೆಸುತ್ತಿರುವ ಅನ್ಯಾಯಗಳೆಲ್ಲಾ ಮಣಿಕಂಠನ ಗಮನಕ್ಕೆ ಬಂದುವು. ಅವನಲ್ಲಿರುವ ದೈವತ್ವದ ಪ್ರಜ್ಞೆ ಜಾಗೃತವಾಯಿತು. ಅವನು ಮಹಿಷಿಯನ್ನು ಹಿಡಿದೆಳೆದು ಭೂಲೋಕಕ್ಕೆ ಎಸೆದನು. ಅವಳು ಅಯುತಾ ನದಿಯ ದಂಡೆಗೆ ಬಂದು ಬಿದ್ದಳು. ಇಬ್ಬರ ನಡುವೆ ಘೋರವಾದ ಯುದ್ಧ ನಡೆಯಿತು. ಕೊನೆಗೆ ಮಣಿಕಂಠನು ಮಹಿಷಿಯ ಎದೆಯನ್ನೇರಿ ತಾಂಡವ ನೃತ್ಯಗೈದನು. ಅದರ ಪ್ರತಿಧ್ವನಿ ಭೂಮಿಯಲ್ಲೂ ಸ್ವರ್ಗದಲ್ಲೂ ವ್ಯಾಪಿಸಿತು. ದೇವತೆಗಳೂ ಭಯ ಭೀತರಾದರು. ತನ್ನ ಮೇಲೆ ನೃತ್ಯ ಮಾಡುವುದು ಹರಿಹರಸುತನಾದ ಪುಣ್ಯ ಪುರುಷನೆಂಬುದನ್ನು ಮಹಿಷಿ ಅರಿತುಕೊಂಡಳು. ಆ ಚಿಕ್ಕ ಬಾಲಕನಿಗೆ ನಮಸ್ಕರಿಸಿ ಮರಣಕ್ಕೆ ಶರಣಾದಳು.
Support Us 


