ಧಾರಾಕಾರ ಮಳೆ ಅನಾಹುತ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಸೋಮವಾರ ಶಾಲೆಗಳಿಗೆ ರಜೆ
ಬೆಂಗಳೂರಿನ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮುಚ್ಚಲಾಗಿದೆ:ಬೆಂಗಳೂರು ನಗರದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅನೇಕ ಭಾಗಗಳು ಜಲಾವೃತವಾಗಿವೆ. ಇದರಿಂದ ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಮಳೆ ಮತ್ತಷ್ಟು ಸುರಿಯುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಎಲ್ಲ ಶಾಲೆ ಹಾಗೂ ಅಂಗನವಾಡಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
- ಬೆಂಗಳೂರು ನಗರ ಜಿಲ್ಲೆಯಾದ್ಯಂತ ಸೋಮವಾರ ಶಾಲೆ, ಅಂಗನವಾಡಿಗಳಿಗೆ ರಜೆ
- ನಗರದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಪ್ರದೇಶಗಳು ಜಲಾವೃತ
- ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆದೇಶ
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಅವರು ಮೌಖಿಕ ಆದೇಶ ಹೊರಡಿಸಿದ್ದಾರೆ.
ಕಾಲೇಜುಗಳಿಗೆ ಇಲ್ಲ ರಜೆ
ಈ ಘೋಷಣೆಯು ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತಿದ್ದು, ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಣೆ ಮಾಡಿಲ್ಲ.
ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಈ ಸಂಬಂಧ ಅಧಿಕೃತ ಆದೇಶ ಕೂಡ ಹೊರಬೀಳಲಿದೆ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವಂತೆ ನಿರ್ದೇಶಿಸಲಾಗಿದೆ.
Rain alert: IMD ‘orange’, flash flood warning for Himachal Pradesh, other states
ದುರ್ಬಲ ಅಥವಾ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ದುರ್ಬಲ ಅಥವಾ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸರಿದೂಗಿಸುವಂತೆ ಜಿಲ್ಲಾಧಿಕಾರಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಪೋಷಕರು/ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.