HomeNewsTragedy in Doda: 10 Army Personnel Killed - ಜಮ್ಮು ಮತ್ತು ಕಾಶ್ಮೀರ |Kannada...

Tragedy in Doda: 10 Army Personnel Killed – ಜಮ್ಮು ಮತ್ತು ಕಾಶ್ಮೀರ |Kannada Folks

ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.

Tragedy in Doda: 10 Army Personnel Killed – ಜಮ್ಮು ಮತ್ತು ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ.ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು!

Read this – ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ- Kannada News | Bangalore Braces for Record Cold| kannadafolks

ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಸೇನೆ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಆರಂಭದಲ್ಲಿ ನಾಲ್ವರು ಯೋಧರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, 13 ಮಂದಿಯನ್ನು ಸಮೀಪದ ಸೇನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಕೆಲವು ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ವಿಮಾನದಲ್ಲಿ ರವಾನಿಸಲಾಗಿದೆ. ಬಳಿಕ ಇನ್ನೂ ಏಳು ಸಿಬ್ಬಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಸೇನಾ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×