Under 16 Social Media Ban-16ಕೆಳಗಿನರಿಗೆ ಮೀಡಿಯಾ ಬ್ಯಾನ್
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಈ ಹಿಂದೆಯೇ ಚಿಂತನೆ ನಡೆಸಿತ್ತು. ಅದರಂತೆ ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಐತಿಹಾಸಿಕ 17ನೇ ಬಜೆಟ್ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿರ್ಬಂಧಿಸುವ ಬಗ್ಗೆ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಸ್ವಾಗತಿಸಿದ್ದಾರೆ.
Read this : T20 WC Rain Rules-T20 WC 2026: ರದ್ದು? |Kannada Folks
06: ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ. ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗೂ ಆದ್ಯತೆ ನೀಡಲಾಗಿದೆ. ಅದರಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ (Social Media Ban) ಮಾಡಲಾಗಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (Lahar Singh Siroya) ಸ್ವಾಗತಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ‘ಕರ್ನಾಟಕ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ವಿಷಯವನ್ನು ನಾನು ಸಂಸತ್ತಿನಲ್ಲಿ ವಿಶೇಷ ಪ್ರಸ್ತಾಪದ ಮೂಲಕ ಧ್ವನಿ ಎತ್ತಿದ್ದೆ’ ಎಂದು ಹೇಳಿದ್ದಾರೆ.
‘ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮುಂದಿನ ಯುವ ಪೀಳಿಗೆಯ ಹಿತಾಸಕ್ತಿಯನ್ನು ಭದ್ರಪಡಿಸುವ ನಿಟ್ಟಿನಲ್ಲಿ ಮಾತನಾಡಿದ್ದರು’ ಎಂದರು.
‘ಮಕ್ಕಳಲ್ಲಿ ಸ್ಮಾರ್ಟ್ಫೋನ್ ಬಳಕೆಗೆ ಮಿತಿಗಳನ್ನು ವಿಧಿಸುವ ಅಗತ್ಯವನ್ನೂ ನನ್ನ ಸಂಸತ್ತಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದೆ. ಈ ವಿಷಯವನ್ನೂ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂಬ ನಿರೀಕ್ಷೆ ನನಗಿದೆ. ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ವಿಷಯದಲ್ಲಿ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸ್ಪಷ್ಟ ಹಾಗೂ ಪರಿಣಾಮಕಾರಿ ನಿಯಮಗಳನ್ನು ರೂಪಿಸಬೇಕಾಗಿದೆ’ ಎಂದು ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


