HomeNewsVeerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು...

Veerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ?

ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ವೀರೇಂದ್ರ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು

Veerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ?

ಖ್ಯಾತ ಡೈರೆಕ್ಟರ್ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಹೊಸ ಅಪ್​​ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (Veera Kambala) ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ. ಈ ಸಿನಿಮಾದಲ್ಲಿನ ಒಂದು ಮಹತ್ವದ ಪಾತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ನಟಿಸಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಈ ಮೊದಲೇ ಹೊರಬಂದಿತ್ತು. ಆದರೆ, ನಿರ್ದೇಶಕರಾಗಲಿ, ಚಿತ್ರತಂಡದವರಾಗಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಿಟ್ಟು ಕೊಡದೆ ಗೌಪ್ಯತೆ ಕಾಪಾಡಿಕೊಂಡಿದ್ದರು. ಈಗ ವೀರೇಂದ್ರ ಹೆಗ್ಗಡೆ ನಿರ್ವಹಿಸಿರೋ ಪಾತ್ರದ ಚಹರೆಗಳನ್ನು ನಿರ್ದೇಶಕರೇ ಪ್ರೇಕ್ಷಕರ ಮುಂದಿಟ್ಟಿದ್ದಾರೆ.Veera Kambala: 'ವೀರ ಕಂಬಳ' ಸಿನಿಮಾದಲ್ಲಿ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ; ಯಾವ ಪಾತ್ರ - Kannada News | Dharmasthala Dharmadhikari Dr Veerendra Heggade acting in Veera Kambala Movie | TV9 Kannada

ಈ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಅವರನ್ನೇ ಆಯ್ಕೆ ಮಾಡಿಕೊಂಡಿದ್ದರ ಹಿಂದಿರುವ ಅಂಶಗಳನ್ನೂ ಕೂಡ ರಾಜೇಂದ್ರ ಸಿಂಗ್ ಬಾಬು ಅವರು ಹಂಚಿಕೊಂಡಿದ್ದಾರೆ. ಕಂಬಳದ ಇತಿಹಾಸ ಕೆದಗುತ್ತಾ ಹೋದಂತೆಲ್ಲ ಅದಕ್ಕೂ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೂ ಇರುವ ನಂಟಿನ ವಿಚಾರ ರಾಜೇಂದ್ರ ಸಿಂಗ್ ಬಾಬು ಅವರಿಗೆ ಅಚ್ಚರಿ ಮೂಡಿಸಿತು. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡರು.

ಅದುವರೆಗೆ ತುಳುನಾಡ ಸೀಮೆಯ ಖಾಸಗಿ ಮನರಂಜನೆಯ ಕ್ರೀಡೆಯಾಗಿದ್ದ ಕಂಬಳವನ್ನು 70ರ ದಶಕದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದವರು ವೀರೇಂದ್ರ ಹೆಗ್ಗಡೆ. ಆ ನಂತರ ಅದು ಬೇರೆ ಬೇರೆ ರೂಪಗಳಲ್ಲಿ ರೂಪಾಂತರಗೊಂಡು ಇಡೀ ಕರುನಾಡನ್ನೇ ಸೆಳೆದುಕೊಂಡಿತ್ತು. ಈ ಕಾರಣದಿಂದಲೇ ವೀರೇಂದ್ರ ಹೆಗ್ಗಡೆ ‘ವೀರ ಕಂಬಳ’ ಸಿನಿಮಾದಲ್ಲಿನ ಮಹತ್ವದ ಪಾತ್ರ ಮಾಡಬೇಕೆಂಬ ಆಸೆಯು ನಿರ್ದೇಶಕರ ಮನಸಲ್ಲಿ ಮೂಡಿತ್ತು. ಅದು ನೆರವೇರಿದೆ. ಬಹಳ ಸಂಭ್ರಮದಿಂದಲೇ ವೀರೇಂದ್ರ ಹೆಗ್ಗಡೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

Read This:Highlights news of the day-ದಿನದ ಪ್ರಮುಖ ಸುದ್ದಿಗಳು

‘ವೀರ ಕಂಬಳ’ ಸಿನಿಮಾವನ್ನು ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಬ್ಯಾನರ್ ಮೂಲಕ ಡಾ. ವಿನಿತಾ ವಿಜಯ್ ಕುಮಾರ್ ರೆಡ್ಡಿ ಮತ್ತು ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ತುಳು ಭಾಷೆಯಲ್ಲಿಯೂ ಸಿನಿಮಾ ಬಿಡುಗಡೆ ಆಗಲಿದ್ದು, ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಮುಂತಾದವರು ನಟಿಸಿದ್ದಾರೆ.

ವಿಜಯ್ ಕೊಡಿಯಾಲ್‌ಬೈಲ್ ಅವರು ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಅವರು ಸಂಗೀತ ನೀಡಿದ್ದಾರೆ. ಆರ್. ಗಿರಿ ಅವರ ಛಾಯಾಗ್ರಹಣ, ಶ್ರೀನಿವಾಸ್ ಎಸ್. ಬಾಬು ಅವರ ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಅವರ ಕಲಾ ನಿರ್ದೇಶನ, ಕಾಂತ ಅವರ ಪ್ರಸಾದನ, ಭಾಷಾ ಅವರ ವಸ್ತ್ರವಿನ್ಯಾಸ ಈ ಸಿನಿಮಾಗಿದೆ.

Read This:Highlights news of the day-ದಿನದ ಪ್ರಮುಖ ಸುದ್ದಿಗಳು

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×