HomeNewsVokkaliga 2nd Math - ಮಠ ವಿವಾದದ ಬಗ್ಗೆ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ

Vokkaliga 2nd Math – ಮಠ ವಿವಾದದ ಬಗ್ಗೆ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ

Vokkaliga 2nd Math - ಮಠ ವಿವಾದದ ಬಗ್ಗೆ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ

Vokkaliga 2nd Math – ಮಠ ವಿವಾದದ ಬಗ್ಗೆ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ

ರಾಜಕೀಯದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ ವಿಚಾರ ಆಗಾಗ್ಗೆ ಚರ್ಚೆಯಾಗುತ್ತಲೇ ಇರುತ್ತದೆ.ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿದ್ದ ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಮತ್ತಿತರರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

Read this-Boost Energy Naturally: Hill Amla ಬೆಟ್ಟದ ನೆಲ್ಲಿಕಾಯಿ

ಇದಕ್ಕೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ ಆಗುತ್ತಿದ್ದರೇ? ಎಂದು ಪ್ರಶ್ನಿಸಿದರು.

ದೇವೇಗೌಡರ ಪರ ಸ್ವಾಮೀಜಿಗಳು ಬೀದಿಗಳಿದಿರಲಿಲ್ಲವೇ? ಸದಾನಂದ ಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ? ಎಂದು ಕಿಡಿಕಾರಿದರು.

Read this-Bumper Gift for Police Who Cracked Bengaluru Robbery Case  ಪೊಲೀಸರಿಗೆ ಬಂಪರ್ ಗಿಫ್ಟ್

ಬಾಳೆಹೊನ್ನೂರು, ಶ್ರೀಶೈಲ ಸ್ವಾಮೀಜಿ ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.ನಾನು ಸ್ವಾಮೀಜಿ ಬೆಂಬಲ ಕೇಳಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಕೇಳಿದ್ದೇನಾ? ನಾನು ಕೂಡಾ ಯಾರ ಬೆಂಬಲ ಕೇಳಿಲ್ಲ. ಅವರು ಪ್ರೀತಿಯಿಂದ ಮಾತನಾಡಿದರೆ ಬೇಡ ಎನ್ನಲು ಸಾಧ್ಯವೇ ಎಂದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×