West Bengal – ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು?
ಪಶ್ಚಿಮ ಬಂಗಾಳದಲ್ಲಿ ಈ ವರ್ಷದ ವಿಧಾನಸಭಾ ಚುನಾವಣೆಯ ಪ್ರಮುಖ ಅಂಶಗಳಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದ್ದು ಕೂಡ ಭಾರೀ ಚರ್ಚೆಯ ವಿಷಯವಾಗಿತ್ತು. ಎಸ್ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಹತ್ತಿದ್ದ ಮಮತಾ ಬ್ಯಾನರ್ಜಿಗೆ ಜಯ ಸಿಗಲಿಲ್ಲ. ಇದೀಗ ಚುನಾವಣಾ ಫಲಿತಾಂಶದಲ್ಲಿ ಟಿಎಂಸಿ ಹಿಂದುಳಿದಿರುವುದಕ್ಕೂ ಇದೇ ಕಾರಣ ಎಂದು ಟಿಎಂಸಿ ನಾಯಕರು ಆರೋಪಿಸುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ದಾಖಲೆಯಿಲ್ಲದ, ಎರಡೆರಡು ಕ್ಷೇತ್ರಗಳಲ್ಲಿ ಹೆಸರಿರುವ ಮುಂತಾದ ಕಾರಣದಿಂದಾಗಿ 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಬಂಗಾಳದ ಮತದಾರರ ಪಟ್ಟಿಯಿಂದ ಕೈಬಿಡಲಾಗಿತ್ತು! ಎಸ್ಐಆರ್ನಿಂದ ಟಿಎಂಸಿಗೆ ನಿಜಕ್ಕೂ ಹೊಡೆತ ಬಿದ್ದಿತೇ? ಎಂಬ ವಿಶ್ಲೇಷಣೆ ಇಲ್ಲಿದೆ.
ಐಆರ್ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಮರ ಸಾರಿತ್ತು. ಇದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ನಲ್ಲಿ ತಾವೇ ವಾದವನ್ನೂ ಮಾಡಿಕೊಂಡು ಬಂಗಾಳದಲ್ಲಿ ಎಸ್ಐಆರ್ (SIR) ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. ಆದರೂ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿರಲಿಲ್ಲ. ಎಸ್ಐಆರ್ನಿಂದಾಗಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಟಿಎಂಸಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದರು. ಹಾಗಾದರೆ, ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರ ಹೆಸರು ಡಿಲೀಟ್ ಆಗಿರುವ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? ಎಂಬ ಕುತೂಹಲ ನಿಮಗೂ ಇರಬಹುದು. ಅದಕ್ಕೆ ಉತ್ತರ ಇಲ್ಲಿದೆ.

Read here: Party Wise Election Results 2026 Winners ಕನ್ನಡ ಬಿಜೆಪಿ ಕಾಂಗ್ರೆಸ್ ಟಿಎಂಸಿ ಪಶ್ಚಿಮ ಬಂಗಾಳ
ಚುನಾವಣೆಗೂ ಸ್ವಲ್ಪ ಮೊದಲು ಚುನಾವಣಾ ಆಯೋಗವು ಮೃತಪಟ್ಟ ಮತ್ತು ನಕಲಿ ಮತದಾರರ ದಾಖಲೆಗಳನ್ನು ಸ್ವಚ್ಛಗೊಳಿಸುವ ಗುರಿಯನ್ನು ಹೊಂದಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ಕೈಗೆತ್ತಿಕೊಂಡಿತ್ತು. ಇದಾದ ನಂತರ ರಾಜ್ಯದ 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಈ ಕ್ರಮದಿಂದ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಭಾರೀ ಹೊಡೆತ ಬೀಳಲಿದೆ ಎಂದು ಟಿಎಂಸಿ ಆರೋಪಿಸಿತ್ತು.
ಆದರೆ, ಆಶ್ಚರ್ಯಕರ ಸಂಗತಿಯೆಂದರೆ ಯಾವ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆಯೋ ಅಲ್ಲೆಲ್ಲ ಟಿಎಂಸಿ ಉತ್ತಮ ಪ್ರದರ್ಶನವನ್ನೇ ನೀಡಿದೆ. ಪಶ್ಚಿಮ ಬಂಗಾಳದ 147 ಕ್ಷೇತ್ರಗಳಲ್ಲಿ ತಲಾ 25,000ಕ್ಕೂ ಹೆಚ್ಚು ಹೆಸರುಗಳನ್ನು ತೆಗೆದುಹಾಕಲಾಗಿದೆ. ಎನ್ಡಿಟಿವಿ ನಡೆಸಿದ ವಿಶ್ಲೇಷಣೆಯ ಪ್ರಕಾರ, ಈ ಸ್ಥಾನಗಳಲ್ಲಿ ಗಮನಾರ್ಹ ಪಾಲು ಬಿಜೆಪಿಗೆ ಹೋಗಿದ್ದು, ಅದು 147ರಲ್ಲಿ 95 ಸ್ಥಾನಗಳನ್ನು ಪಡೆದುಕೊಂಡಿದೆ. ತೃಣಮೂಲ ಪಕ್ಷ 51 ಗೆದ್ದರೆ, ಕಾಂಗ್ರೆಸ್ ಕೇವಲ ಒಂದನ್ನು ಮಾತ್ರ ಗೆದ್ದಿತು.
15,000 ರಿಂದ 25,000 ಹೆಸರುಗಳನ್ನು ಡಿಲೀಟ್ ಮಾಡಿರುವ 67 ಕ್ಷೇತ್ರಗಳಲ್ಲಿ, ಬಿಜೆಪಿ ಮತ್ತೆ 47 ಗೆಲುವುಗಳೊಂದಿಗೆ ಮುನ್ನಡೆ ಸಾಧಿಸಿತು. ಟಿಎಂಸಿಗೆ 19 ಮತ್ತು ಕಾಂಗ್ರೆಸ್ಗೆ 1 ಸ್ಥಾನಗಳು ದೊರೆತವು. 5,000ರಿಂದ 15,000 ಹೆಸರುಗಳನ್ನು ಡಿಲೀಟ್ ಮಾಡಲಾಗಿದ್ದ 62 ಸ್ಥಾನಗಳಲ್ಲಿ, ಬಿಜೆಪಿ 50 ಸ್ಥಾನವನ್ನು ಗೆದ್ದಿತು. ಉಳಿದವು ಟಿಎಂಸಿ ಪಾಲಾಯಿತು. 5,000ಕ್ಕಿಂತ ಕಡಿಮೆ ಹೆಸರುಗಳನ್ನು ಡಿಲೀಟ್ ಮಾಡಿದ ಎಲ್ಲಾ 13 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


